ಕರಾವಳಿ

ಕಾಲೇಜಿನ ಬಳಿ ಲಾರಿ ಪಲ್ಟಿ : ಚಾಲಕನ ಸಮಯ ಪ್ರಜ್ಞೆಯಿಂದ ವಿದ್ಯಾರ್ಥಿಗಳು ಅಪಾಯದಿಂದ ಪಾರು!..

Pinterest LinkedIn Tumblr

Bantwala_Lory_Palty_1

ಬಂಟ್ವಾಳ, ಆ. 23: ಗೊಬ್ಬರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳವಾರ ಸಂಜೆ ಬಂಟ್ವಾಳ ತಾಲೂಕಿನ ಎಸ್.ವಿ.ಎಸ್ ಕಾಲೇಜಿನ ತಿರುವಿನಲ್ಲಿ ನಡೆದಿದೆ.

ಆದರೆ ಈ ಸಂದರ್ಭ ಚಾಲಕನ ಸಮಯ ಪ್ರಜ್ಞೆಯಿಂದ ಕಾಲೇಜಿನ ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Bantwala_Lory_Palty_2 Bantwala_Lory_Palty_3

ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿರುವ ಲಾರಿ ಚಾಲಕ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ಅನಾಹುತ ಸಂಭವಿಸಲಿಲ್ಲ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.

Comments are closed.