ನವದೆಹಲಿ (ಪಿಟಿಐ): ಅರುಣಾಚಲ ಪ್ರದೇಶ ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಯುವಂತೆ ಜ್ಯೋತಿ ಪ್ರಕಾಶ್ ರಾಜ್ಕೊವಾ ಅವರನ್ನು ಕೇಂದ್ರದ ಮಂತ್ರಿಯೊಬ್ಬರು ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ರದ್ದುಪಡಿಸಿ, ಸರ್ಕಾರ ರಚಿಸಲು ಕಾಂಗ್ರೆಸ್ಗೆ ಸುಪ್ರೀಂಕೋರ್ಟ್ ಅವಕಾಶ ಮಾಡಿಕೊಟ್ಟ ನಂತರ ಈ ಬೆಳವಣಿಗೆ ನಡೆದಿದೆ. ರಾಜ್ಕೊವಾ ಅವರ ರಾಜೀನಾಮೆ ಕೇಳಲೂ ಇದೇ ಪ್ರಮುಖ ಕಾರಣ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸಚಿವರೊಬ್ಬರು ಕರೆ ಮಾಡಿ, ರಾಜೀನಾಮೆ ನೀಡಿ ಎಂದು ರಾಜ್ಕೊವಾ ಅವರನ್ನು ಕೇಳಿಕೊಂಡಿದ್ದಾರೆ. ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರೂ ಕರೆ ಮಾಡಿ ಇದೇ ಮಾತು ಹೇಳಿದ್ದಾರೆ. ಆದರೆ ಅಧಿಕೃತವಾಗಿ ಯಾವುದೇ ಪತ್ರ ಬಂದಿಲ್ಲ ಎಂದು ರಾಜಭವನದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ರಾಜ್ಕೊವಾ ಅವರು ಗೃಹ ಸಚಿವ ರಾಜನಾಥ್ ಸಿಂಗ್ ಅವರಲ್ಲಿ ಸ್ಪಷ್ಟನೆ ಕೇಳಿದ್ದಾರೆ. ಆದರೆ ರಾಜ್ಕೊವಾ ತಮ್ಮ ಸ್ಥಾನದಿಂದ ಇಳಿಯುವ ಅವಶ್ಯಕತೆ ಇಲ್ಲ ಎಂದು ರಾಜನಾಥ್ ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.
Comments are closed.