ರಾಷ್ಟ್ರೀಯ

ಕೇರಳದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಹತ್ಯೆ

Pinterest LinkedIn Tumblr

murder-1ಕಣ್ಣೂರು: ಕೇರಳದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿರುವುದರ ಬಗ್ಗೆ ವರದಿಯಾಗಿದೆ.
ಆಡಳಿತಾರೂಢ ಸಿಪಿಐ(ಎಂ) ಕಾರ್ಯಕರ್ತರು ಹಾಗು ಬಿಜೆಪಿ ಕಾರ್ಯಕರ್ತರ ನಡುವೆ ಕಣ್ಣೂರಿನಲ್ಲಿ ನಡೆದ ಘರ್ಷಣೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, 26 ವರ್ಷದ ಬಿನೀಶ್ ಎಂದು ತಿಳಿದುಬಂದಿದೆ. ತೀವ್ರವಾಗಿ ಗಾಯಗೊಂಡಿದ್ದ ಸ್ಥಿತಿಯಲ್ಲಿ ಪೊಲೀಸರು ಬಿನೀಶ್ ನ್ನು ಪತ್ತೆ ಮಾಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಒಂದು ವಾರದಿಂದ ಕಣ್ಣೂರಿನಲ್ಲಿ ಬಿಜೆಪಿ- ಸಿಪಿಐ(ಎಂ) ಕಾರ್ಯಕರ್ತರ ನಡುವೆನ ಘರ್ಷಣೆಯಿಂದಾಗಿ ಆತಂಕಕಾರಿ ವಾತಾವರಣ ನಿರ್ಮಾಣವಾಗಿತ್ತು. ಸಿಪಿಐ ಕಾರ್ಯಕರ್ತರೊಬ್ಬರ ಕಾರಿನ ಮೇಲೆ ದಾಳಿ ನಡೆಸಿ ಕಾರ್ಯಕರ್ತ ಗಾಯಗೊಂಡ ಘಟನೆ ನಂತರ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆಯನ್ನು ಖಂಡಿಸಿರುವ ಬಿಜೆಪಿ ಕಣ್ಣೂರು ಜಿಲ್ಲೆ ಬಂದ್ ಗೆ ಕರೆ ನೀಡಿದೆ.

Comments are closed.