ಬೆಂಗಳೂರು: ತುರ್ತಾಗಿ ಕಾವೇರಿ ಕೊಳದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.
ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟಿರುವುದರಿಂದ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು ಕಾವೇರಿ ಕೊಳದ ಜಿಲ್ಲೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಈ ಬಂದ್ ಬಿಸಿ ಐಟಿ ನಗರಿ ಬೆಂಗಳೂರಿಗೂ ತಟ್ಟಿದ್ದು ಉತ್ಪಾದನಾ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿರುವುದರಿಂದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಿ ಕಾವೇರಿ ಕೊಳದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಬೇಕೆಂದು ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.
Comments are closed.