ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿ ರಕ್ಷಣಾ ಪಡೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದು, ಕಾಶ್ಮೀರ ಗಲಭೆಯಲ್ಲಿ ಸಾವಿಗೀಡಾದವರ ಸಂಖ್ಯೆ 75ಕ್ಕೇರಿದೆ.
ಕಲ್ಲು ತೂರಾಟ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸುವುದಕ್ಕಾಗಿ ಪೊಲೀಸರು ಅಶ್ರುವಾಯು ದಾಳಿ ನಡೆಸಿದರ ಪರಿಣಾಮ ಸಯಾರ್ ಅಹ್ಮದ್ ಶೇಖ್ ಎಂಬವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅದೇ ವೇಳೆ ಅನಂತ್ನಾಗ್ ಜಿಲ್ಲೆಯ ಬೊಟೆಂಗೋದಲ್ಲಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಇಲ್ಲಿ ನಡೆದ ಘರ್ಷಣೆಯಲ್ಲಿ ಪೆಲೆಟ್ ತಾಗಿ ಭಟ್ ಯಾವಾರ್ ಭಟ್ ಎಂಬವರು ಸಾವಿಗೀಡಾಗಿದ್ದಾರೆ.
Comments are closed.