ಮಂಡ್ಯ:ನಮಗೆ ನೀರು ಕೊಡದೆ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಮೂಲಕ ನಮ್ಮ ಬೆಳೆ ನಾಶವಾಗಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಂಡ್ಯ ಪಶ್ಚಿಮ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಂಬಿ ನಾವು ಬೆಳೆ ಬೆಳೆದಿದ್ದೇವೆ. ಆದರೆ ಅವರು ನಮಗೆ ನೀರು ಕೊಡದೆ, ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದ್ದರಿಂದ ನಮ್ಮ ಬೆಳೆಗಳು ನಾಶವಾಗಿದೆ. ಅಷ್ಟೇ ಅಲ್ಲ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಸಿಎಂ ಯತ್ನಿಸಿರುವುದಾಗಿ ಬಿಜೆಪಿ ಕಾರ್ಯಕರ್ತ ಸಿದ್ದರಾಜು ಎಂಬವರು ದೂರಿನಲ್ಲಿ ಆರೋಪಿಸಿದ್ದಾರೆ.
ಶುಕ್ರವಾರ ತಮಿಳುನಾಡಿಗೆ ನೀರು ಬಿಡಬೇಕೆಂದು ಆದೇಶ ನೀಡಿದ್ದ ಸುಪ್ರೀಂಕೋರ್ಟ್ ನ 3 ಜಡ್ಜ್ ಸೇರಿದಂತೆ 9 ಮಂದಿ ವಿರುದ್ಧ ಮಂಡ್ಯದ ಸ್ಥಳೀಯ ನಿವಾಸಿ ಎಂಡಿ ರಾಜಣ್ಣ ಮಂಡ್ಯದ ಜೆಎಂಎಫ್ ಸಿ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು.
-ಉದಯವಾಣಿ
Comments are closed.