
ಬೆಂಗಳೂರು: ನಾಳಿನ ರೈಲ್ವೆ ಬಂದ್ನಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ತಡೆಯಲು ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರೈಲ್ವೆ ಪೊಲೀಸರು ಟ್ವೀಟಿಸಿದ್ದಾರೆ.
ರಾಜ್ಯದ ಎಲ್ಲ ರೈಲ್ವೆ ನಿಲ್ದಾಣಗಳಲ್ಲಿಯೂ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ರೈಲ್ವೆ ಪೊಲೀಸರೊಂದಿಗೆ ಸ್ಥಳೀಯ ಪೊಲೀಸರು, ಕೆಎಸ್ಆರ್ಪಿ ಹಾಗೂ ಆರ್ಪಿಎಫ್ ಸಿಬ್ಬಂದಿಗಳ ಸಹಕಾರದೊಂದಿಗೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಿಗದಿತ ವೇಳಾ ಪಟ್ಟಿಯಂತೆ ರೈಲುಗಳ ಸಂಚಾರ ನಡೆಯಲಿದೆ ಎಂದು ಟ್ವೀಟ್ ಮಾಡಲಾಗಿದೆ.
ಕಾವೇರಿ ಹೋರಾಟದ ಮುಂದುವರಿದ ಭಾಗವಾಗಿ ಗುರುವಾರ ರೈಲ್ವೆ ಬಂದ್ ನಡೆಸುವುದಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಗುರುವಾರ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆ ವರೆಗೂ ರೈಲ್ವೆ ಬಂದ್ ನಡೆಸಲಾಗುತ್ತದೆ ಎಂದಿದ್ದಾರೆ. ಕನ್ನಡಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬಂದ್ನಲ್ಲಿ ಭಾಗಿಯಾಗಲಿದ್ದಾರೆ.
ಬಂದ್ನಿಂದ ಬಸ್, ಮೆಟ್ರೋ ಸೇರಿದಂತೆ ಇತರೆ ವಾಹನಗಳ ಸಂಚಾರಕ್ಕೆ ಯಾವುದೇ ಅಡಚಣೆಯಾಗುವುದಿಲ್ಲ ಎನ್ನಲಾಗಿದೆ.
Comments are closed.