ಕರ್ನಾಟಕ

ಕಾವೇರಿ ಕಿಚ್ಚಿನ ಹಿಂಸಾಚಾರದ ಹಿಂದೆ RSS ಕೈವಾಡ?; ಪರಮೇಶ್ವರ್

Pinterest LinkedIn Tumblr

g-parameshwaraಬೆಂಗಳೂರು: ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶ ವಿರೋಧಿಸಿ ನಡೆದಿದ್ದ ಕರ್ನಾಟಕ ಬಂದ್ ಸಂದರ್ಭದಲ್ಲಿನ ಗಲಭೆ ಹಿಂದೆ ಆರ್ ಎಸ್ ಎಸ್ ಕೈವಾಡ ಇರುವ ಬಗ್ಗೆ ಅನುಮಾನ ಇದ್ದಿರುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶುಕ್ರವಾರ ಕೆಪಿಸಿಸಿ ಪದಾಧಿಕಾರಿಗಳ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂದರ್ಭದಲ್ಲಿ ಪರಮೇಶ್ವರ್ ಅವರು ಗಲಭೆ ಸಂಬಂಧ ಪ್ರಶ್ನಗೆ ಈ ಉತ್ತರ ನೀಡಿದ್ದಾರೆ.

ಕಾವೇರಿ ಗಲಾಟೆ ಹಿಂದೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇದ್ದಿರುವ ಶಂಕೆ ಇದೆ. ಈ ಬಗ್ಗೆ ಪ್ರತ್ಯೇಕ ತನಿಖೆ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಅವರು ಹೇಳಿದರು.

ಕಾವೇರಿ ವಿವಾದ ಸಂಬಂಧ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಹಲವಾರು ಬಸ್, ಲಾರಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಹಿಂಸಾಚಾರವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪೊಲೀಸರು ಹೆಗ್ಗನಹಳ್ಳಿಯಲ್ಲಿ ನಡೆಸಿದ ಗುಂಡಿನ ದಾಳಿಗೆ ಉಮೇಶ್ ಎಂಬ ಯುವಕ ಸಾವನ್ನಪ್ಪಿದ್ದರು. ಲಾಠಿಚಾರ್ಜ್ ನಲ್ಲಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿತ್ತು.

-ಉದಯವಾಣಿ

Comments are closed.