
ಬೆಂಗಳೂರು: ಅಕ್ರಮವಾಗಿ ಚಿನ್ನದ ಬಿಸ್ಕತ್ಗಳನ್ನು ಸಾಗಾಟ ಮಾಡುತ್ತಿದ್ದ ರಾಮಮೂರ್ತಿ (32) ಎಂಬುವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದರು.
‘ಆರೋಪಿಯಿಂದ ₹28.48 ಲಕ್ಷ ಮೌಲ್ಯದ 900 ಗ್ರಾಂ ತೂಕದ ಒಂಬತ್ತು ಚಿನ್ನದ ಬಿಸ್ಕತ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು. ‘ಟೈಗರ್ ಏರ್ಲೈನ್ಸ್ ಸಂಸ್ಥೆಯ ‘ಟಿಆರ್ 2652’ ವಿಮಾನದ ಮೂಲಕ ಸಿಂಗಾಪುರದಿಂದ ಬೆಂಗಳೂರಿಗೆ ಬಂದಿದ್ದ ರಾಮಮೂರ್ತಿ ಅವರನ್ನು ತಪಾಸಣೆಗೆ ಒಳಪಡಿಸಲಾಯಿತು’.
‘ಈ ವೇಳೆ ಅವರು ತಮ್ಮ ಅಂಗಿಯಲ್ಲಿ ಚಿನ್ನದ ಬಿಸ್ಕತ್ಗಳನ್ನು ಅಡಗಿಸಿ ಇಟ್ಟುಕೊಂಡಿರುವುದು ಬೆಳಕಿಗೆ ಬಂತು. ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಹೇಳಿದರು.
Comments are closed.