ರಾಷ್ಟ್ರೀಯ

ಆರ್‌ಎಸ್‌ಎಸ್‌ ನಾಯಕ ಗಗ್ನೇಜರ ಗುಂಡಿಕ್ಕಿ ಹತ್ಯೆ

Pinterest LinkedIn Tumblr

jagdish-gagnejaಲೂಧಿಯಾನ: ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿಗೆ ಗುರಿಯಾಗಿದ್ದ ಹಿರಿಯ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್‌) ನಾಯಕ ಜಗದೀಶ್ ಗಗ್ನೇಜ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಲೂಧಿಯಾನದ ಹಿರೋ ಡಿಎಂಸಿ ಹಾರ್ಟ್ ಇನ್‌ಸ್ಟಿಟ್ಯೂಟ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ವರ್ಷದ ಗಗ್ನೇಜ ಅವರು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಜಿ ಎಸ್. ವ್ಯಾಂಡರ್ ತಿಳಿಸಿದ್ದಾರೆ.
ಆಗಸ್ಟ್ 6 ರಂದು ಬೈಕ್ ನಲ್ಲಿ ಬಂದಿದ್ದ ಹಂತಕರು ಆರ್ಎಸ್ಎಸ್ ಪಂಜಾಬ್ ಘಟಕದ ಉಪಾಧ್ಯಕ್ಷರಾಗಿರುವ ಗಗ್ನೇಜ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ತೀವ್ರ ಗುಂಡಿನ ದಾಳಿಗೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Comments are closed.