ರಾಷ್ಟ್ರೀಯ

ಪಾಕ್ ವಿರುದ್ಧ ಸೇನಾ ಕಾರ್ಯಾಚರಣೆಗೆ ಕೇಂದ್ರ: ಸುಬ್ರಹ್ಮಣ್ಯಂ ಸ್ವಾಮಿ

Pinterest LinkedIn Tumblr

subra

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡ ನಿರ್ಧಾರದಿಂದ ಪಾಕಿಸ್ತಾನ ತುಂಬಾ ಸಂಕಷ್ಟ ಅನುಭವಿಸುವುದು ಖಚಿತ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ.

ಬಿಜೆಪಿಯ ಮತ್ತೊಬ್ಬ ಮುಖಂಡ ಸಿದ್ಧಾರ್ಥ ನಾಥ್ ಸಿಂಗ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಪಾಕಿಸ್ತಾನದ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುವ ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಮೋದಿ ಮತ್ತು ರಕ್ಷಣಾ ಸಚಿವರ ಹೇಳಿಕೆ ಗಮನಿಸಿದಲ್ಲಿ ಸೇನಾ ಕಾರ್ಯಾಚರಣೆ ನಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಉರಿ ಸೇನಾ ಕೇಂದ್ರದ ಮೇಲೆ ನಡೆದ ಉಗ್ರರ ದಾಳಿಯ ಸೇಡು ತೀರಿಸಿಕೊಳ್ಳುತ್ತೇವೆ ಎನ್ನುವ ಪ್ರಧಾನಿ ಹೇಳಿಕೆ ಹುಸಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ರಕ್ಷಣಾ ಖಾತೆ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ.

ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿ 18 ಸೈನಿಕರನ್ನು ಕೊಂದ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ರಿಕ್ತ ವಾತಾವರಣ ಉಂಟಾಗಿದೆ.

Comments are closed.