ರಾಷ್ಟ್ರೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೆ ಬರೆದ ಪತ್ರದಲ್ಲಿ ಏನಿದೆ…? ಮುಂದೆ ಓದಿ….

Pinterest LinkedIn Tumblr

A delegation led by Chief Minister Siddaramaiah called on Prime Minister Narendra Modi to submit a memorandum on Mekedatu project and Language Police in New Delhi on Thursday. -KPN ### CM in New Delhi

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಶುಕ್ರವಾರ ಕೈಗೊಂಡ ಸರ್ವಾನುಮತದ ನಿರ್ಣಯದ ಬಗ್ಗೆ ವಿವರಣೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಕಾವೇರಿ ಜಲಾಶಯಗಳ ನೀರನ್ನು ಕುಡಿಯುವುದಕ್ಕೆ ಮಾತ್ರ ಬಳಸಲು ಹಾಗೂ ಇದಕ್ಕೆ ಹೊರತಾದ ಬೇರೆ ಯಾವುದೇ ಕಾರಣಕ್ಕೂ ಒದಗಿಸಲು ಸಾಧ್ಯವಿಲ್ಲವೆಂಬ ನಿರ್ಣಯವನ್ನು ಸದನ ಅಂಗೀಕರಿಸಿದೆ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ತಿಳಿಸಿದ್ದಾರೆ. ಜತೆಗೆ ಪತ್ರದ ಜತೆಗೆ ನಿರ್ಣಯದ ಪ್ರತಿಯನ್ನು ಲಗತ್ತಿಸಲಾಗಿದೆ.

ಸುಪ್ರೀಂ ಕೋರ್ಟ್‌ ಕಳೆದ 20 ರಂದು ತಮಿಳುನಾಡಿಗೆ ಸೆ.27ರವರೆಗೆ 6 ಸಾವಿರ ಕ್ಯೂಸೆಕ್‌ ನೀರು ಬಿಡಬೇಕೆಂದು ಮಧ್ಯಾಂತರ ಆದೇಶ ನೀಡಿದ್ದರೂ ರಾಜ್ಯ ಸರಕಾರ ನ್ಯಾಯಾಲಯದ ಮುಂದೆ ತನ್ನ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಲಿದೆ. ಸದನ ಈ ನಿರ್ಣಯ ಕೈಗೊಂಡಿದ್ದರೂ ತಮ್ಮ ಸರಕಾರಕ್ಕೆ ಸುಪ್ರೀಂಕೋರ್ಟ್‌ ಆದೇಶ ಉಲ್ಲಂಘಿಸುವ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Comments are closed.