
ಮೈಸೂರು: ತಮಿಳುನಾಡಿಗೆ ಮತ್ತೆ 32 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ನಂತರ ಸಮಾರಂಭದಲ್ಲಿ ಮಾತನಾಡಿದ ಸಿಎಂ, ನಮ್ಮ ಜಲಾಶಯಗಳಲ್ಲಿ ನೀರಿಲ್ಲ. ಹೀಗಾಗಿ ಸೆಪ್ಟೆಂಬರ್ 27ರ ಆದೇಶವನ್ನು ನಾವು ಪಾಲಿಸಲಿಲ್ಲ. ಈಗ ಮತ್ತೆ 6 ದಿನ ನೀರು ಬಿಡುವಂತೆ ಕೋರ್ಟ್ ಆದೇಶಿಸಿರುವುದರಿಂದ ರಾಜ್ಯದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ. ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಪದೇಪದೆ ಅನ್ಯಾಯವಾಗುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.
ನಮಗೆ ಕುಡಿಯಲು ನೀರಿಲ್ಲ. ಆದರೆ ತಮಿಳುನಾಡು ಬೆಳೆಗಳಿಗೆ ನೀರು ಕೇಳುತ್ತಿದೆ. ನಮ್ಮ ರಾಜ್ಯದಲ್ಲಿ ಯಾವುದೇ ಮಳೆ ಮಾರುತಗಳಿಲ್ಲ. ಆದರೆ ತಮಿಳುನಾಡಿನಲ್ಲಿ ಇನ್ನೂ ಮಳೆ ಮಾರುತಗಳಿವೆ ಎಂದರು.
ಇದೇ ವೇಳೆ ಕಾವೇರಿ ಬಿಕ್ಕಟ್ಟು ಬಗೆಹರಿಯಲಿ, ರಾಜ್ಯಕ್ಕೆ ನ್ಯಾಯ ಸಿಗಲಿ ಎಂದು ನಾಡದೇವತೆ ಚಾಮುಂಡೇಶ್ವರಿ ಬಳಿ ಪ್ರಾರ್ಥನೆ ಮಾಡಿರುವುದಾಗಿ ಸಿಎಂ ತಿಳಿಸಿದರು.
Comments are closed.