ಅಂತರಾಷ್ಟ್ರೀಯ

ಭಾರತ-ಪಾಕ್ ಸಂಘರ್ಷ ಪರಿಹಾರಕ್ಕೆ ಮಧ್ಯಸ್ಥಿಕೆಗೆ ಸಿದ್ಧ: ವಿಶ್ವಸಂಸ್ಥೆ

Pinterest LinkedIn Tumblr

banki-moonವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಪರಿಹಾರಕ್ಕೆ ಮಧ್ಯಸ್ಥಿಕೆ ವಹಿಸಲು ನಾವು ತಯಾರಿದ್ದೇವೆ ಎಂದು ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಹೇಳಿದ್ದಾರೆ.

ಅದೇ ವೇಳೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ ಪರಿಹಾರಕ್ಕೆ ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳಬೇಕೆಂದು ಮೂನ್ ಒತ್ತಾಯಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಈಗ ಉಂಟಾಗಿರುವ ಸಂಘರ್ಷದ ಬಗ್ಗೆ ನನಗೆ ಅತೀವ ಆತಂಕವಿದೆ. ಸೆಪ್ಟೆಂಬರ್ 18ರಲ್ಲಿ ಉರಿ ದಾಳಿ ಮತ್ತು ಗಡಿ ನಿಯಂತ್ರಣಾ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ಎಲ್ಲವೂ ಆತಂಕವನ್ನು ಸೃಷ್ಟಿಸಿವೆ.

ಒಂದು ವೇಳೆ ಎರಡೂ ರಾಷ್ಟ್ರಗಳು ಸಮ್ಮತಿಸುವುದಾದರೆ ಕಾಶ್ಮೀರ ಸಮಸ್ಯೆ ಸೇರಿದಂತೆ ಇನ್ನಿತರ ವಿಷಯಗಳ ಚರ್ಚೆಗೆ ಮಧ್ಯಸ್ಥಿಕೆ ವಹಿಸುವುದಾಗಿ ಬಾನ್ ಕಿ ಮೂನ್ ಹೇಳಿಕೆ ನೀಡಿದ್ದಾರೆ.

Comments are closed.