
ಮಡಿಕೇರಿ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದ ಯುವಕರ ಕಾರು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನ ಮೈಸೂರಿನ ಕೆ.ಜಿ.ಕೊಪ್ಪಲು ನಿವಾಸಿಗಳಾದ ನಂದೀಶ್(19) ಚೇತನ್(18) ಹಾಗೂ ಚಂದ್ರು(19) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಪ್ರತಾಪ್, ಸುಹಾಸ್ ಹಾಗೂ ಶಿವಕುಮಾರ್ ರನ್ನು ಮೈಸೂರಿನ ಖಾಸಗಿ ಆಸ್ಪತ್ರಗೆ ರವಾನೆ ಮಾಡಲಾಗಿದೆ.
ಕೆ.ಜಿ ಕೊಪ್ಪಲಿನ ಆರು ಯುವಕರ ತಂಡ ನಿನ್ನೆ ಮೈಸೂರಿನಿಂದ ಮಡಿಕೇರಿಗೆ ಪ್ರವಾಸಕ್ಕೆ ಬಂದ್ದಿದ್ರು. ತಮ್ಮ ಟೂರ್ ಮುಗಿಸಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು ರಸ್ತೆಯಲ್ಲೆಲ್ಲಾ ರಕ್ತ ಚೆಲ್ಲಾಡಿದೆ. ರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು ಸ್ಥಳಕ್ಕೆ ಆಗಮಿಸಿದ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರಿನಲ್ಲಿ ಮದ್ಯದ ಬಾಟಲಿಗಳು ಹಾಗು ಆಹಾರದ ಪಾರ್ಸಲ್ ಪ್ಯಾಕೆಟ್‍ಗಳು ಸಿಕ್ಕಿದ್ದು ಕಾರಿನಲ್ಲಿದ್ದ ಯುವಕರ ತಂಡ ಮದ್ಯ ಸೇವನೆ ಮಾಡಿ ಅತಿವೇಗವಾಗಿ ಕಾರು ಚಾಲನೆ ಮಾಡಿರುವುದು ಅಪಘಾತಕ್ಕೆ ಕಾರಣವಾಗಿರಬಹುದೆಂದು ಹೇಳಲಾಗಿದೆ.
Comments are closed.