ಕರಾವಳಿ

ಗಿಡಮೂಲಿಕೆಗಳ ಬಗ್ಗೆ ಜನಜಾಗೃತಿ ಅಗತ್ಯ : ಆಯುರ್ವೇದ ದಿನಾಚರಣೆ ಉದ್ಘಾಟಿಸಿ ಸಚಿವ ರೈ.

Pinterest LinkedIn Tumblr

townhall_ayur_day_3

ಮಂಗಳೂರು, ಅ.28: ದ.ಕ ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಗಳ ವತಿಯಿಂದ ಶುಕ್ರವಾರ ನಗರದ ಪುರಭವನದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಡೆಯಿತು.

ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಈ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಭಾರತೀಯ ವೈದ್ಯ ಪದ್ಧತಿಗಳ ಬಗ್ಗೆ ಜನರಲ್ಲಿ ನಂಬಿಕೆ ಮೂಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಪ್ರಾಚೀನ ಭಾರತದ ವೈದ್ಯ ಪದ್ಧತಿಗಳಲ್ಲಿ ಗಿಡ ಮೂಲಿಕೆಗಳನ್ನು ಹೆಚ್ಚು ಅವಲಂಬಿಸಲಾಗಿತ್ತು.

townhall_ayur_day_1 townhall_ayur_day_2 townhall_ayur_day_4 townhall_ayur_day_5 townhall_ayur_day_6 townhall_ayur_day_7 townhall_ayur_day_8 townhall_ayur_day_9 townhall_ayur_day_10 townhall_ayur_day_11

ಇತ್ತೀಚಿನ ದಿನಗಳಲ್ಲಿ ಗಿಡಮೂಲಿಕೆಗಳು ನಾಶವಾಗುತ್ತಿರುವುದನ್ನು ಉಳಿಸಬೇಕಾದ ಅಗತ್ಯವಿದೆ. ಅವುಗಳನ್ನು ಸಂರಕ್ಷಿಸುವ ಪ್ರದೇಶಕ್ಕೆ ಜಿಲ್ಲೆಯ ಪುತ್ತೂರಿನಲ್ಲಿ ನಿರ್ಮಾಣವಾಗಿರುವ ದೇಯಿ ಬೈದೇದಿವನ ಉದಾಹರಣೆಯಾಗಿದೆ. ಗಿಡ ಮೂಲಿಕೆಗಳ ವನಗಳನ್ನು ನಿರ್ಮಿಸಲು ಸರಕಾರ ರಾಜ್ಯಾದ್ಯಂತ ಕಾರ್ಯಯೋಜನೆಯನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.

townhall_ayur_day_12 townhall_ayur_day_13 townhall_ayur_day_14

ಯೋಗ, ವ್ಯಾಯಾಮ ಮಾಡಿ ಮಾತ್ರೆಗಳಿಂದ ದೂರವಿರಿ ಎಂದು ಹೇಳಿದ ಅವರು. ಮಧುಮೇಹ ಕಾಯಿಲೆಯ ಲಕ್ಷಣಗಳು ಕಂಡು ಬಂದಾಗ ನಾನು ಯೋಗ ಮತ್ತು ನಿರಂತರ ವ್ಯಾಯಾಮದ ಮೂಲಕ ನನ್ನ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಈಗ ಯಾವೂದೇ ಮಾತ್ರೆ ತೆಗೆದುಕೊಳ್ಳುತ್ತಿಲ್ಲ. ನನ್ನ ಜೀವನ ಕ್ರಮ, ಆಹಾರ ಪದ್ಧತಿಯಲ್ಲಿ ದೇಹದ ಆರೋಗ್ಯವನ್ನು ಕಾಯ್ದುಕೊಂಡಿದ್ದೇನೆ ಎಂದು ರೈ ಅವರು ತಮ್ಮ ಸ್ವ-ಅನುಭವವನ್ನು ತಿಳಿಸಿದರು.

townhall_ayur_day_15 townhall_ayur_day_16

ಪ್ರಾಚೀನ ದೇಸೀಯ ಪದ್ಧತಿಗೆ ಮೂಲ ಆಧಾರವಾದ ಪ್ರಕೃತಿಕ ಚಿಕಿತ್ಸೆ, ಗಿಡಮೂಲಿಕೆಗಳ ಬಗ್ಗೆ ಗಮನಹರಿಸಬೇಕಾದರೆ ಅವುಗಳ ಬಗ್ಗೆ ಜನಜಾಗೃತಿ ಅಗತ್ಯ. ಈ ನಿಟ್ಟಿನಲ್ಲಿ ಪ್ರಸಕ್ತ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಸಹಾಯವಾಗುವಂತಾಗಲಿ ಎಂದು ಅವರು ಶುಭ ಹಾರೈಸಿದರು.

townhall_ayur_day_17 townhall_ayur_day_18 townhall_ayur_day_19 townhall_ayur_day_20

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಇಕ್ಬಾಲ್, ಜಿಲ್ಲಾ ವೈದ್ಯಾಧಿಕಾರಿ ಡಾ.ರಾಜೇಶ್ವರಿ ದೇವಿ, ಆಯುಷ್ ಫೌಂಡೇಶನ್ನ ಪದಾಧಿಕಾರಿಗಳಾದ ಡಾ.ಆಶಾಜ್ಯೊತಿ ರೈ, ಕೃಷ್ಣ ರಾಜ್ ಭಟ್, ಹಿರಿಯ ವೈದ್ಯಾಧಿಕಾರಿ ಡಾ.ದೇವದಾಸ್ ಹಾಗೂ ವಿವಿಧ ಆರ್ಯುವೇದ ಕಾಲೇಜಿನ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Comments are closed.