ರಾಷ್ಟ್ರೀಯ

ಆತ್ಮಹತ್ಯೆಗೈದ ಯೋಧನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ವಿ.ಕೆ.ಸಿಂಗ್

Pinterest LinkedIn Tumblr

vk_singhನವದೆಹಲಿ (ನ.02): ಸಮಾನ ಹುದ್ದೆ-ಸಮಾನ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ವಿಳಂಬದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಯೋಧನ ಮಾನಸಿಕ ಆರೋಗ್ಯದ ಬಗ್ಗೆ ಹೇಳಿಕೆ ನೀಡಿ ಕೇಂದ್ರ ಮಂತ್ರಿ ವಿವಾದವನ್ನು ಸೃಷ್ಟಿಸಿದ್ದಾರೆ.
ಆ ಮಾಜಿ ಯೋಧ ಆತ್ಮಹತ್ಯೆ ಮಾಡಿಕೊಂಡ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆತನ ಮಾನಸಿಕ ಆರೋಗ್ಯ ಹೇಗಿತ್ತು ಎಂದು ಯಾರಿಗೂ ಗೊತ್ತಿಲ್ಲ. ಆ ಬಗ್ಗೆ ತನಿಖೆಯಾಗಬೇಕು. ಸಮಾನ ಹುದ್ದೆ-ಸಮಾನ ಪಿಂಚಣಿ ಯೋಜನೆಯನ್ನು ರಾಜಕೀಯಕರಣಗೊಳಿಸಬಾರದು, ಎಂದು ಕೇಂದ್ರ ಸಚಿವರೂ, ಭೂಸೇನೆಯ ನಿವೃತ್ತ ಮುಖ್ಯಸ್ಥರೂ ಆಗಿರುವ ವಿ,ಕೆ.ಸಿಂಗ್ ಹೇಳಿದ್ದಾರೆ.
ರಾಮ್ ಕಿಶನ್ ಗ್ರೆವಾಲ್ ಎಂಬ ನಿವೃತ್ತ ಯೋಧ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಮಾನ ಹುದ್ದೆ-ಸಮಾನ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಆಗುತ್ತಿರುವ ವಿಳಂಬದಿಂದ ನೊಂದಿದ್ದರು ಎನ್ನಲಾಗಿದೆ.
ಗ್ರೆವಾಲ್ ಕುಟುಂಬಸ್ಥರು, ಆತ್ಮಹತ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ ಹಾಗೂ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಗ್ರೆವಾಲ್ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್’ಗೆ ಪತ್ರ ಬರೆದಿದ್ದರು ಎನ್ನಲಾಗಿದೆ.

Comments are closed.