ಕರ್ನಾಟಕ

ರುದ್ರೇಶ್ ಕೊಲೆ ಪ್ರಕರಣ: ಪ್ರಮುಖ ಆರೋಪಿ ಬಂಧನ

Pinterest LinkedIn Tumblr

rudresh

ಬೆಂಗಳೂರು: ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪಿಎಫ್‍ಐನ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಅಸೀಫ್ ಷರೀಫ್‍ನನ್ನ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಮಾಸ್ಟರ್ ಮೈಂಡ್ ಅಸೀಫ್ ಷರೀಫ್ ಜೊತೆಗೆ ಮತ್ತೊಬ್ಬ ಆರೋಪಿ ಇಸ್ತಾಕ್‍ನನ್ನ ಕೂಡ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಮಜರ್ ಸೇರಿದಂತೆ ಬಂಧಿತರಾಗಿರುವ ನಾಲ್ವರು ಆರೋಪಿಗಳು ದಿನಕ್ಕೊಂದು ಸ್ಫೋಟಕ ಮಾಹಿತಿಗಳನ್ನ ಬಿಚ್ಚಿಡುತ್ತಿದ್ದಾರೆ.

ನಮಗೆ ಇಬ್ಬರು ಆರ್‍ಎಸ್‍ಎಸ್ ಕಾರ್ಯಕರ್ತರನ್ನ ಹತ್ಯೆ ಮಾಡಲು ಸುಪಾರಿ ಕೊಟ್ಟಿದ್ದರು. ಆದ್ರೆ ಮತ್ತೊಬ್ಬ ಕಾರ್ಯಕರ್ತ ಮಿಸ್ ಆದ. ಕೊನೆಗೆ ವಾಸಿಂ ರುದ್ರೇಶ್ ಕತ್ತನ್ನ ಕತ್ತರಿಸಿದ ಅಂತ ಆರೋಪಿಗಳು ತನಿಖೆ ವೇಳೆ ಬಾಯ್ಬಿಟ್ಟಿದ್ದಾರೆ. ಆದ್ರೆ ಈವರೆಗೆ ಸುಪಾರಿ ಕೊಟ್ಟ ಮುಖಂಡರ ಬಗ್ಗೆ ಮಾತ್ರ ಸುಳಿವು ನೀಡಿಲ್ಲ.

ಅ.16 ರಂದು ಶಿವಾಜಿನಗರದ ಕಾಮರಾಜ ರಸ್ತೆಯಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು.

Comments are closed.