ನವದೆಹಲಿ: ಮಾಧ್ಯಮಗಳ ಮೇಲೆ ನಿಷೇಧ ಹೇರುವ ನಿರ್ಧಾರ ದೇಶದಲ್ಲಿ ಎರಡನೇ ತುರ್ತುಪರಿಸ್ಥಿತಿಗೆ ಕಾರಣವಾಗುತ್ತದೆ ಎಂದು ಡಿಎಂಕೆ ಶನಿವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಡಿಎಂಕೆ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರು, ಎನ್ ಡಿಟಿವಿ ಸುದ್ದಿ ವಾಹಿನಿ ಮೇಲೆ ನಿಷೇಧ ಹೇರುವುದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಲ್ಲಂಘನೆ ಮಾಡಿದಂತಾಗುತ್ತದೆ. ಈ ರೀತಿಯ ನಿರ್ಧಾರ ದೇಶದಲ್ಲಿ 2ನೇ ತುರ್ತುಪರಿಸ್ಥಿತಿಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.
ಎನ್ ಡಿಟಿವಿ ಮೇಲೆ ನಿಷೇಧ ಹೇರುವ ನಿರ್ಧಾರ ತುರ್ತುಪರಿಸ್ಥಿತಿಯ ದಿನವನ್ನು ನೆನಪಿಸುತ್ತಿದೆ. ಕೇಂದ್ರ ಸರ್ಕಾರ ಈ ರೀತಿಯ ನಿರ್ಧಾರವನ್ನು ಮುಂದುವರೆಸಿದ್ದೇ ಆದರೆ, ಇದು 2ನೇ ತುರ್ತುಪರಿಸ್ಥಿತಿಗೆ ಕಾರಣವಾಗುತ್ತದೆ. ಹೀಗಾಗಿ ಕೂಡಲೇ ನಿರ್ಧಾರ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಧ್ಯಸ್ಥಿಕೆ ವಹಿಸಬೇಕಿದೆ. ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಯಾವುದೇ ರೀತಿಯ ಧಕ್ಕೆಯಿಲ್ಲ ಎಂದು ಹೇಳಬೇಕಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಮಾಜಿ ಯೋಧನ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರತಿಭಟನೆಯಲ್ಲಿ ನಿರತರಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಬಂಧನಕ್ಕೊಳಪಡಿಸಿದ ನಿರ್ಧಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಂತಾಪ ಸೂಚಿಸುವುದು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುವುದು ಪ್ರಜಾಪ್ರಭುತ್ವ ಹಕ್ಕಾಗಿದ್ದು, ಪ್ರತಿಭಟನೆ ಮಾಡುವವರನ್ನು ಬಂಧಿಸಿವುದು ಮಾನವ ಹಕ್ಕಿನ ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ
Comments are closed.