
ನವದೆಹಲಿ: ನೋಟು ನಿಷೇಧದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ಮೋದಿ ಗುಜರಾತ್ ಮುಖ್ಯಮಂತ್ರಿಗಳಾಗಿದ್ದಾಗ 25 ಕೋಟಿ ರು. ಲಂಚ ಸ್ವೀಕರಿಸಿದ್ದರು ಎಂದು ಆರೋಪಿಸಿದ್ದಾರೆ.
ಗುಜರಾತ್ ನಲ್ಲಿ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಪ್ರಕರಣ ಸಂಬಂಧ ನರೇಂದ್ರ ಮೋದಿ 25 ಕೋಟಿ ರು. ಲಂಚ ಸ್ವೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.
2013ರಲ್ಲಿ ಮೋದಿ ಗುಜರಾತ್ ಸಿಎಂ ಆಗಿದ್ದ ಸಂದರ್ಭದಲ್ಲಿ ಆದಿತ್ಯ ಬಿರ್ಲಾ ಗ್ರೂಪ್ ಸಂಸ್ಥೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಧಿಕಾರಿಗಳು ಕೆಲ ಲ್ಯಾಪ್ ಟಾಪ್ ಗಳುಸ ಮೊಬೈವ್ ಫೋನ್ ಗಳು ಹಾಗೂ ಹಾರ್ಡ್ ಡಿಸ್ಕ್ ಗಳನ್ನು ವಶಪಡಿಸಿಕೊಂಡಿದ್ದರು. ಇವಗಳನ್ನು ಪರಿಶೀಲಿದಾಗ ಒಂದು ದತ್ತಾಂಶದಲ್ಲಿ ಗುಜರಾತ್ ಸಿಎಂ 25 ಕೋಟಿ (12 ಕೋಟಿ ನಗದು) ಎಂಬ ಬರಹ ಕಂಡುಬಂದಿದ್ದು, ಇದನ್ನು ಸೂಕ್ಷ್ಮವಾಗಿ ಪರಿಶೀಲಿಸಿದರೆ ಮೋದಿ 25 ಕೋಟಿ ಲಂಚ ಪಡೆದಿದ್ದು, ಈ ಪೈಕಿ 12 ಕೋಟಿ ನೀಡಲಾಗಿದ್ದು, ಉಳಿದ ಹಣದ ನೀಡುವ ಕುರಿತು ಬರೆಯಲಾಗಿದೆ ಎಂದು ಆರೋಪಿಸಿದ್ದಾರೆ.
ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ಈ ಆರೋಪಗಳ ಕುರಿತು ಸಂಪೂರ್ಣ ತನಿಖೆಯಾಗಬೇಕು ಎಂದು ಕೇಜ್ರಿವಾಲ್ ಆಗ್ರಹಿಸಿದ್ದಾರೆ.
ಇನ್ನು ಕೇಜ್ರಿವಾಲ್ ಆರೋಪಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಇಂತಹ ಆಧಾರ ರಹಿತ ಆರೋಪಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ. ಕೇಜ್ರಿವಾಲ್ ಅವರು ಮೊದಲಿನಿಂದಲೂ ಇಂತಹ ಇಲ್ಲ-ಸಲ್ಲದ ಆರೋಪಗಳನ್ನು ಮಾಡುತ್ತಲೇ ಸುದ್ದಿಯಾದವರು. ಹೀಗಾಗಿ ಇಂತಹವರ ಆರೋಪಕ್ಕೆ ಹೆಚ್ಚು ಪ್ರಚಾರ ಬೇಡ ಎಂದು ಬಿಜೆಪಿ ಮುಖಂಡ ವಿಜೇಂದರ್ ಗುಪ್ತಾ ಹೇಳಿದ್ದಾರೆ. ಇನ್ನು ಕೇಜ್ರಿವಾಲ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಬಿರ್ಲಾ ಸಂಸ್ಥೆ ಕೂಡ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.
Comments are closed.