ಕರಾವಳಿ

ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿರ ‘ಸ್ವಾತಂತ್ರ್ಯದ ಓಟ’ ಕಾದಂಬರಿಗೆ 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Pinterest LinkedIn Tumblr

boluvaru-mohammed

ನವದೆಹಲಿ: ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿ ಅವರಿಗೆ 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ.

ಬೊಳುವಾರರ ‘ಸ್ವಾತಂತ್ರ್ಯದ ಓಟ’ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

ಒಂದು ಲಕ್ಷ ರೂ ನಗದು ಮತ್ತು ಪ್ರಶಸ್ತಿ ಫಲಕ ಹೊಂದಿರುವ ಅಕಾಡೆಮಿ ಪ್ರಶಸ್ತಿಯನ್ನು ೨೦೧೭ ಫೆಬ್ರವರಿಯಲ್ಲಿ ಪ್ರಧಾನ ಮಾಡಲಾಗುತ್ತದೆ. ಕಳೆದ ವರ್ಷ ಕೆ ವಿ ತಿರುಮಲೇಶ್ ಅವರ ಅಕ್ಷರ ಕಾವ್ಯ ಕವನಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಕನ್ನಡ ವಿಭಾಗಗ ಆಯ್ಕೆ ಸಮಿತಿಯಲ್ಲಿ ಹಿರಿಯ ಸಾಹಿತಿಗಳಾದ ಡಾ. ಎಚ್ ಸಿ ಬೋರಲಿಂಗಯ್ಯ, ಎಲ್ ಹನುಮಂತಯ್ಯ ಮತ್ತು ಎಸ್ ಜಿ ಸಿದ್ಧರಾಮಯ್ಯನವರು ಇದ್ದದ್ದನ್ನು ಕೂಡ ಪತ್ರಿಕಾ ಹೇಳಿಕೆ ತಿಳಿಸಿದೆ.

Comments are closed.