
ಹುಬ್ಬಳ್ಳಿ (ಜ.20): ಸಂಸ್ಕಾರಕ್ಕೆ ತಗೆದುಕೊಂಡ ಹೋದ ಮಗುವೊಂದು ಪವಾಡ ಸದೃಶ್ಯವಾಗಿ ಬದುಕಿ ಬಂದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕಳೆದ ಒಂದು ವಾರದ ಹಿಂದೆ ಇದೇ ಗ್ರಾಮದ ಫಕೀರಪ್ಪ ಹಾಗೂ ನೇತ್ರಾವತಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಕಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಇನ್ನು ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಧಾರವಾಡದ ಎಸ್’ಡಿಎಂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಚಿಕಿತ್ಸೆ ನಂತರ ಖಾಸಗಿ ಆಸ್ಪತ್ರೆ ವೈದ್ಯರು ಮಗು ಸಾವನ್ನಪ್ಪಿದೆ ಎಂದು ಪೋಷಕರಿಗೆ ತಿಳಿಸಿದ್ದಾರೆ. ಮೂರ್ಛೆರೋಗ ಕಾಯಿಲೆ ಇದ್ದಿದ್ದರಿಂದ ಮಗು ಸಾವನ್ನಪ್ಪಿದೆ ಎಂದು ವೈದ್ಯರು ವರದಿ ಕೊಟ್ಟಿದ್ದಾರೆ. ಹಾಗಾಗಿ ಪೋಷಕರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು.
ಮಗುವನ್ನು ದೇವಿಕೊಪ್ಪ ಗ್ರಾಮಕ್ಕೆ ತಂದು ಸಂಪ್ರದಾಯದಂತೆ ಬಿಸಿ ನೀರಿನಿಂದ ಸ್ನಾನ ಮಾಡಿಸಿ ಸ್ಮಶಾನಕ್ಕೆ ತಗೆದುಕೊಂಡು ಹೋದಾಗ ಮಗುವಿನ ಚಲನವಲನ ಕಾಣಿಸಕೊಂಡಿದೆ. ಕೂಡಲೇ ಮಗುವನ್ನು ಕಲಘಟಗಿ ತಾಲೂಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಗ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ಸಲಹೆ ನೀಡಿದ್ದು, ತೀವ್ರ ನಿಘಾ ಘಟಕದಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಈ ಘಟನೆಗೆ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಮಗುವಿನ ಸಂಬಂಧಿಕರು ಆರೋಪಿಸಿದ್ದಾರೆ.
ಕರ್ನಾಟಕ
Comments are closed.