ಕರಾವಳಿ

ಪೇಜಾವರ ಶ್ರೀ ಮತ್ತೆ ಮಣಿಪಾಲ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಉಡುಪಿ: ತಿಂಗಳ ಹಿಂದಷ್ಟೇ ಹರ್ನಿಯಾ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಉಡುಪಿಯ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಶ್ರೀಗಳಿಗೆ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ಮತ್ತೆ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಪರೇಶನ್ ಬಳಿಕವೂ ಹೊಟ್ಟೆ ನೋವು ಕಾಣಿಸಿಕೊಂಡದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪೇಜಾವರ ಶ್ರೀಗಳಿಗೆ ಆರೋಗ್ಯ ತಪಾಸಣೆ ಮಾಡಬೇಕೆಂದು ಮಣಿಪಾಲ ಕೆಎಂಸಿ ವೈದ್ಯರು ಸಲಹೆ ನೀಡಿದ್ದರು. ದಾಖಲಾದ ವಿಶ್ವೇಶತೀರ್ಥರನ್ನು, ಸ್ಕ್ಯಾನಿಂಗ್ ಗೆ ಒಳಪಡಿಸಲಾಯ್ತು. ಎರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವ ಸಾಧ್ಯತೆಯಿದೆ. ಸ್ಕಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿರುವ ವೈದ್ಯರು ತಪಾಸಣೆ ನಡೆಸಿದ್ದಾರೆ.

ರಾತ್ರಿಯ ಪೂಜೆ ಪೂರೈಸಿ, ಕೆಎಂಸಿ ಆಸ್ಪತ್ರೆಗೆ ತೆರಳಿರುವ ಸ್ವಾಮೀಜಿ ಅನುಷ್ಟಾನಗಳನ್ನೂ ಪೂರೈಸಿದ್ದಾರೆ. ಸ್ವಾಮೀಜಿ ಆರೋಗ್ಯವಾಗಿದ್ದಾರೆ, ಭಕ್ತರಿಗೆ ಆತಂಕ ಬೇಡ ಎಂದು ಉಡುಪಿ ಕೃಷ್ಣ ಮಠದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Comments are closed.