
ಚಿಕ್ಕಬಳ್ಳಾಪುರ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಮುಕ್ತಾವಾಗಿದ್ದು, ಗೌರಿ ಹಂತಕರು ಯಾರೆಂದು ಗೊತ್ತಾಗಿದೆ. ಶೀಘ್ರದಲ್ಲೇ ಆರೋಪಿಗಳು ಯಾರೆಂಬುದನ್ನು ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಗೌರಿ ಹಂತಕರು ಯಾರು ಎಂಬುದನ್ನು ಶೀಘ್ರವೇ ಬಹಿರಂಗಗೊಳಿಸುವುದಾಗಿ ಹೇಳಿದರು.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಕುರಿತು ವಿಶೇಷ ತನಿಖಾ ತಂಡ(ಎಸ್ಐಟಿ) ತನಿಖೆ ನಡೆಸುತ್ತಿತ್ತು. ಪೊಲೀಸರು ಗೌರಿ ಲಂಕೇಶ್ ಮನೆಯಿಂದ ಸಿಸಿಟಿವಿ ದೃಶ್ಯವನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದರು.
– ಉದಯವಾಣಿ
Comments are closed.