
ಮುಂಬೈ: ಬೀದಿ ಬದಿ ವ್ಯಾಪಾರಿಗಳನ್ನುತೆರವುಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ದಾದರ್ನಲ್ಲಿ ಬುಧವಾರ ಘರ್ಷಣೆ ನಡೆಯಿತು.
ಬೀದಿ ಬದಿ ವ್ಯಾಪಾರಿಗಳ ಪರ ಕಾಂಗ್ರೆಸ್ ನಗರ ಘಟಕ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಗೆ ಎಂಎನ್ಎಸ್ ಕಾರ್ಯಕರ್ತರು ಅಡ್ಡಿಪಡಿಸಿದಾಗ ಈ ಘಟನೆ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಪೊಲೀಸರು 15 ಎಂಎನ್ಎಸ್ ಮತ್ತು 8 ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ರೈಲ್ವೆ ನಿಲ್ದಾಣದ ಆವರಣದಲ್ಲಿ ವ್ಯಾಪಾರ ನಡೆಸುವುದಕ್ಕೆ ಎಂಎನ್ಎಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಎಲ್ಫಿನ್ಸ್ಟೋನ್ ಪಾದಚಾರಿ ಮಾರ್ಗದಲ್ಲಿ ನಡೆದ ದುರಂತದ ಬಳಿಕ ಅಕ್ರಮ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಎಂಎನ್ಎಸ್ ಒತ್ತಾಯಿಸುತ್ತಿದೆ. ಆದರೆ, ಕಾಂಗ್ರೆಸ್ ಈ ವ್ಯಾಪಾರಿಗಳಿಗೆ ಬೆಂಬಲ ವ್ಯಕ್ತಪಡಿಸಿದೆ.
Comments are closed.