
ಮೈಸೂರು: ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬರುತ್ತಿರುವ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್-5ರಿಂದ ನನಗೆ ಅನ್ಯಾಯವಾಗಿದೆ. ಕೇವಲ ಟಿಆರ್ಪಿಗಾಗಿ ಸಾಮಾನ್ಯರಿಗೆ ಅವಕಾಶ ನೀಡಿಲ್ಲ. ಅದಕ್ಕಾಗಿ ವಾಹಿನಿಯ ವಿರುದ್ಧ ನ್ಯಾಯಾಂಗ ಹೋರಾಟ ಮಾಡುವುದಾಗಿ ನಗರದ ಟೈಲರ್ ಭಯಾನಕ ನಾಗರಾಜ್ ಹೇಳಿದ್ದಾರೆ.
ಇಂದು ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾಗರಾಜ್, ಪ್ರಸ್ತುತ ನಡೆಯುತ್ತಿರುವ ಬಿಗ್ಬಾಸ್ನಲ್ಲಿ ಸಾಮಾನ್ಯರಿಗೆ ಅವಕಾಶ ನೀಡಲಾಗುವುದೆಂದು ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಆನ್ಲೈನ್ ಮೂಲಕ ಸಹ ಅರ್ಜಿ ಸಲ್ಲಿಸಿದೆ. ಅರ್ಜಿ ಅಂಗೀಕೃತವಾದ ರಸೀದಿಯು ಸಹ ಬಂದಿತ್ತು. ಕಾರ್ಯಕ್ರಮ ಆರಂಭವಾಗುವವರೆಗೆ ಕಾದೆ. ಆದರೆ ಯಾವುದೇ ಸೂಚನೆ ನೀಡದೆ ಇದ್ದರಿಂದ ನನ್ನ ಸಮಯ ವ್ಯರ್ಥವಾಗಿದೆ. ಈ ಬಗ್ಗೆ ನ್ಯಾಯಾಂಗ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.
ಟೈಲರ್ ವೃತ್ತಿ ನಿರ್ವಹಿಸುತ್ತಿರುವ ನಾನು ಒಬ್ಬ ಸಾಮಾನ್ಯ. ನನ್ನ ಸ್ವವಿವರ ಹಾಗೂ ತಾವು ಇತರರಿಗಿಂತ ಭಿನ್ನವೆಂದು ತೋರಿಸುವ ವಿಡಿಯೋವನ್ನು ಅಪ್ಲೋಡ್ ಮಾಡಿದ್ದೆ. ಈಗ ಸ್ಪರ್ಧೆಯಲ್ಲಿ ಭಾಗಿಯಾಗಿರುವ ಸಾಮಾನ್ಯರು ಹೇಗೆ ಭಿನ್ನವೆಂದು ಎಲ್ಲಿಯೂ ಸ್ಪಷ್ಟನೆ ನೀಡಿಲ್ಲ. ಪೂರ್ವ ನಿರ್ಣಯದಂತೆ ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ಕೇವಲ ಟಿಆರ್ಪಿಗಾಗಿ ಸಾಮಾನ್ಯರಿಗೆ ಅವಕಾಶ ನೀಡಲಾಗುವುದು ಎಂದು ಸುಳ್ಳು ಪ್ರಕಟಣೆ ನೀಡಿದ್ದಾರೆ. ಪೂರ್ವ ನಿಯೋಜಿತ ಕಾರ್ಯಕ್ರಮದಂತೆ ನಡೆಯುತ್ತಿರುವ ಬಿಗ್ಬಾಸ್ ಶೋ ನಿಲ್ಲಬೇಕು ಇಲ್ಲವೇ ವಾಹಿನಿ ವಿರುದ್ಧ ನ್ಯಾಯಾಂಗ ಹೋರಾಟ ನಡೆಸುವುದಾಗಿ ಹೇಳಿದರು.
Comments are closed.