ರಾಷ್ಟ್ರೀಯ

ಲವ್ವಿಡವ್ವಿಯಲ್ಲಿ ಬಿದ್ದು ಗರ್ಭಿಣಿಯಾದ 10ನೇ ತರಗತಿ ವಿದ್ಯಾರ್ಥಿನಿ

Pinterest LinkedIn Tumblr


ಚೆನ್ನೈ: 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ.

ವಿದ್ಯಾರ್ಥಿನಿ ಎಂದಿನಂತೆ ಶಾಲೆಗೆ ಆಗಮಿಸಿದಾಗ ತಲೆಸುತ್ತು ಬಂದು ಶಾಲೆಯ ಆವರಣದಲ್ಲಿಯೇ ಬಿದ್ದಿದ್ದಳು. ಶಾಲಾ ಶಿಕ್ಷಕರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಎನ್ನುವುದು ಪರೀಕ್ಷೆಯಿಂದ ಪತ್ತೆಯಾಗಿತ್ತು. ಇದರಿಂದ ಆಸ್ಪತ್ರೆಯ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ

ವೈದ್ಯರ ಸೂಚನೆ ಮೇರೆಗೆ ಆಸ್ಪತ್ರೆಗೆ ಆಗಮಿಸಿದ ಪೊಲೀಸರು, ಬಾಲಕಿ ಮತ್ತು ಆಕೆಯ ತಾಯಿಯನ್ನು ವಿಚಾರಣೆ ನಡೆಸಿದ್ದಾರೆ. ನೆರೆಮನೆಯಲ್ಲಿರುವ ಕಟ್ಟಡ ಕಾರ್ಮಿಕನನ್ನು ಪ್ರೀತಿಸುತ್ತಿರುವುದಾಗಿ ಬಾಲಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಕಳೆದ ಮೂರು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವುದು ಪ್ರಾಥಮಿಕ ವಿಚಾರಣೆಯಿಂದ ಬಹಿರಂಗವಾಗಿದೆ. ಹುಡುಗಿಯ ತಂದೆ ಕಾರ್ಮಿಕನಾಗಿದ್ದು ಉತ್ತರ ಚೆನ್ನೈ ಪ್ರದೇಶದ ನಿವಾಸಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣವು ಎಲ್ಲ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲ್ಪಟ್ಟಿದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಸಂದರ್ಭದಲ್ಲಿ (ಪೋಕ್ಸೊ) ಆಕ್ಟ್ ದಾಖಲಿಸಲಾಗಿದೆ.

ಆರೋಪಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.