
ಯಾದಗಿರಿ: ಪಾಪಿ ಪತಿಯೊಬ್ಬ ಪತ್ನಿಯನ್ನು ಕೊಲೆಗೈದು ಶವವನ್ನು ಜಿಲ್ಲಾಸ್ಪತ್ರೆಗೆ ತಂದು ಅಲ್ಲಿಯೇ ಶವ ಬಿಟ್ಟು ಪರಾರಿಯಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಸುರಪುರ ತಾಲೂಕಿನ ರುಕ್ಮಾಪುರ ಗ್ರಾಮದ ಶಾಂತಮ್ಮ ಹಾಗೂ ಶಾಹಪುರ ತಾಲೂಕಿನ ಖಾನಾಪುರ ಗ್ರಾಮದ ಆರೋಪಿ ವೆಂಕಟೇಶ್ ಜೊತೆ ಕಳೆದ ಮೇ ತಿಂಗಳಲ್ಲಿ ಪ್ರೇಮ ವಿವಾಹವಾಗಿದ್ದರು.
ಇದಕ್ಕೂ ಮೊದಲೇ ಈತನಿಗೆ ವಿವಾಹವಾಗಿದ್ದು, ಮೂವರು ಮಕ್ಕಳಿದ್ದರು. ಆದರೂ ಸಹ ಬೆಂಗಳೂರಿನ ಗಾರ್ಮೆಂಟ್ಸ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಶಾಂತಮ್ಮ ಹಾಗೂ ವೆಂಕಟೇಶ್ ನಡುವೆ ಪ್ರೇಮಾಂಕುರವಾಗಿತ್ತು.
ಈ ದಂಪತಿಯ ನಡುವೆ ಕೌಟುಂಬಿಕ ಕಲಹವಿತ್ತು ಎನ್ನಲಾಗಿದೆ. ನಿನ್ನೆ ರಾತ್ರಿ ಮನೆಯಲ್ಲಿ ಪರಸ್ಪರ ಜಗಳ ಮಾಡಿಕೊಂಡಿದ್ದರು. ಈ ವೇಳೆ ಆರೋಪಿ ವೆಂಕಟೇಶ್ ಪತ್ನಿಯನ್ನು ಕೊಲೆಗೈದು ಬೈಕ್‌ನಲ್ಲಿ ಶವ ಹೊತ್ತು ಜಿಲ್ಲಾಸ್ಪತ್ರೆಗೆ ತಂದಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹಣದಾಸೆಗಾಗಿ ಮಗಳನ್ನು ಆರೋಪಿ ವೆಂಕಟೇಶ ಕೊಲೆ ಮಾಡಿದ್ದಾನೆಂದು ಶಾಂತಮ್ಮನ ಪೋಷಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ವಡಗೇರಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Comments are closed.