ಕರ್ನಾಟಕ

ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ಪ್ರತಿಭಟನೆ: ಕವಿತಾ ಲಂಕೇಶ್ ಸೇರಿ ಹಲವರ ಬಂಧನ

Pinterest LinkedIn Tumblr

ಬೆಂಗಳೂರು: ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕವಿತಾ ಲಂಕೇಶ್, ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ(ಚಂಪಾ) ಸೇರಿ ಹಲವರನ್ನು ಪೊಲೀಸರು ಬಂಧಿಸಿದರು.

ಮಂಗಳವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಗೌರಿ ಲಂಕೇಶ್ ಬಳಗದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾದ ಹೋರಾಟಗಾರರನ್ನು ಬಂಧಿಸಿದ ಪೊಲೀಸರು, ಪೊಲೀಸ್ ವಾಹನದ ಮೂಲಕ ಇಲ್ಲಿನ ಅಶೋಕ ನಗರ ಪೊಲೀಸ್ ಠಾಣೆಗೆ ಕರೆದೊಯ್ದರು.

ಕೋಮು ಸೌಹಾರ್ದ ವೇದಿಕೆ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಅಶೋಕ್, ವಕೀಲ ಅನಂತ್‌ನಾಯ್ಕ, ನರಸಿಂಹಮೂರ್ತಿ, ತ್ರಿಮೂರ್ತಿ, ಗೌರಿ ಸೇರಿದಂತೆ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ.

Comments are closed.