
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣರ ಹೆಸರು ನಾಮಕರಣ ಮಾಡಬೇಕು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಆಗ್ರಹಿಸಿದರು.
ಮೇಲ್ದರ್ಜೆಗೇರಿಸಿರುವ ಹುಬ್ಬಳ್ಳಿ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ನಿಲ್ದಾಣ ಎಂದು ಹಾಗೂ ಮುಂಬಯಿ ವಿಮಾನ ನಿಲ್ದಾಣಕ್ಕೆ ಛತ್ರಪತಿ ಶಿವಾಜಿ ಎಂದು ನಾಮಕರಣ ಮಾಡಲಾಗಿದೆ. ಅಂತೆಯೇ, ವಿಶ್ವಕ್ಕೇ ಮಹಾಮಾನವತಾವಾದಿ ಜಗಜ್ಯೋತಿ ಎಂದು ಕರೆಯುವ ಬಸವಣ್ಣನವರ ಹೆಸರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಒತ್ತಾಯಿಸಿದರು.
ಮುಂದಿನ ದಿನಗಳಲ್ಲಿ ಹುಬ್ಬಳ್ಳಿಯಿಂದ ಅಂತಾಷ್ಟ್ರೀಯ ದೇಶಗಳಿಗೆ ವಿಮಾನಗಳು ಸಂಚರಿಸುವ ದಿನಗಳು ದೂರ ಇಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದರು.
Comments are closed.