ಕರ್ನಾಟಕ

ರವಿ ಬೆಳಗೆರೆ ಸುಪಾರಿ ನೀಡಿದ ಪ್ರಕರಣದ ಮತ್ತೊಬ್ಬ ಆರೋಪಿ ಬಂಧನ

Pinterest LinkedIn Tumblr


ಮೀರಜ್: ಹಾಯ್ ಬೆಂಗಳೂರು ಸಂಸ್ಥಾಪಕ ರವಿ ಬೆಳಗೆರೆ ಅವರು ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ವಿಜು ಬಡಿಗೇರನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರ ಪೊಲೀಸರ ನೆರವಿನೊಂದಿಗೆ ಭೀಮಾತೀರದ ಹಂತಕ ಶಶಿಧರ್ ಮುಂಡೆವಾಡಿ ಅಳಿಯ ವಿಜು ಬಡಿಗೇರನನ್ನು ಮೀರಜ್ ರೈಲ್ವೆ ನಿಲ್ದಾಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿ, ಬೆಂಗಳೂರಿಗೆ ಕರೆತರುತ್ತಿದ್ದಾರೆ.ವಿಜು ಬಡಿಗೇರ್ ಬಂಧನಕ್ಕೆ ಪೊಲೀಸರು ತೀವ್ರ ಶೋಧ ನಡೆಸಿದ್ದರು. ಅಂತಿಮವಾಗಿ ಮೀರಜನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶ ಸಾಧಿಸಿದ್ದಾರೆ.

Comments are closed.