ಕರಾವಳಿ

ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನೆರವೇರಿಸಿದ ಸಚಿವ ಪ್ರಮೋದ್ ಮಧ್ವರಾಜ್

Pinterest LinkedIn Tumblr

ಕುಂದಾಪುರ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ ಮಧ್ವರಾಜ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಬೇಟಿ ನೀಡಿದರು. ಈ ಸಂದರ್ಭ ಅರ್ಚಕ ನರಸಿಂಹ ಅಡಿಗ ಇವರ ಮೂಲಕ ಚಂಡಿಕಾ ಹೋಮ ನೆರವೇರಿಸಿದರು.

ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಿ.ಸಿ. ಜನಾರ್ಧನ, ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಮೇಶ ಗಾಣಿಗ, ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸ್ ಹೆಬ್ಬಾರ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಹಾಗೂ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀಶ ಉಪಾಧ್ಯ ಉಪಸ್ಥಿತರಿದ್ದರು.

Comments are closed.