ಕರ್ನಾಟಕ

ಇಂದಿರಾ ಗಾಂಧಿ ಅವರೂ ಜೈಲಿಗೆ ಹೋಗಿದ್ದರು: ಯಡಿಯೂರಪ್ಪ

Pinterest LinkedIn Tumblr


ರಾಯಚೂರು: ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಮಂತ್ರಿ ದಿ.ಇಂದಿರಾಗಾಂಧಿ ಅವರೂ ಜೈಲಿಗೆ ಹೋಗಿ ಬಂದಿದ್ದಾರೆ ಎಂಬುದು ಮರೆತಿದ್ದಾರೆಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ಅವರು ಜಾಮೀನಿನ ಮೇಲೆ ಓಡಾಡುತ್ತಿರುವುದು ಸಿದ್ದರಾಮಯ್ಯಗೆ ತಿಳಿದಿಲ್ಲವೇ ಎಂದು ಗುಡುಗಿದ್ದಾರೆ.

ನಾಲ್ಕುವರೆ ವರ್ಷ ಆಡಳಿತ ನಡೆಸಿರುವ ಸಿದ್ದರಾಮಯ್ಯ ಇಷ್ಟು ದಿನಗಳು ಅಸತ್ಯದ ನಡಿಗೆ ಮಾಡಿ, ಈಗ ಸತ್ಯದ ನಡಿಗೆ ಎಂದು ಹೇಳುತ್ತಿರುವುದು ದೆವ್ವದ ಬಾಯಲ್ಲಿ ಭಗದ್ಗೀತೆ ಕೇಳಿದಂತೆ ಆಗುತ್ತಿದೆ ಎಂದು ಟೀಕಿಸಿದರು.

Comments are closed.