ಕುಂದಾಪುರ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸಕುಟುಂಬಿಕರಾಗಿ ಗುರುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.

ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ದೇಗುಲದ ಕಾರ್ಯ ನಿರ್ವಹಣಾಧಿಕಾರಿ ಜನಾರ್ದನ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ಸಮಿತಿ ಸದಸ್ಯರಾದ ರಮೇಶ್ ಗಾಣಿಗ ಕೊಲ್ಲೂರು, ನರಸಿಂಹ ಹಳಗೇರಿ, ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ ಕಿಶನ್ ಹೆಗ್ಡೆ, ಅರ್ಚಕ ಡಾ| ಕೆ.ಎನ್. ನರಸಿಂಹ ಅಡಿಗ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ಜಯಪ್ರಕಾಶ ಶೆಟ್ಟಿ, ತಾ.ಪಂ. ಸದಸ್ಯೆ ಗ್ರೀಷ್ಮಾ ಭಿಡೆ, ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಕಾಂಗ್ರೆಸ್ ಮುಖಂಡರಾದ ಸನತ್ ಬಳೆಗಾರ, ವಾಸುದೇವ ಯಡಿಯಾಳ, ದೇವದಾಸ್, ಪಿ.ಎಲ್. ಜೋಸ್, ರಂಗ ನಾಯ್ಕ ಮೊದಲಾದವರು ಸಚಿವರನ್ನು ಬರಮಾಡಿಕೊಂಡರು.
Comments are closed.