ಕರಾವಳಿ

ನಾಳೆಯಿಂದ ಮಂಗಳೂರಿನಲ್ಲಿ ಕರಾವಳಿ ಉತ್ಸವ: ನಟ ಪ್ರಕಾಶ್ ರೈ ಉದ್ಘಾಟನೆ- ಸಂಜೆ ಬೃಹತ್ ಸಾಂಸ್ಕಂತಿಕ ಮೆರವಣಿಗೆ

Pinterest LinkedIn Tumblr

( ಕಡತ ಚಿತ್ರ )

ಮಂಗಳೂರು ಡಿಸೆಂಬರ್ 21: ಮಂಗಳೂರಿನಲ್ಲಿ ವರ್ಷಾಂಪ್ರತಿ ನಡೆಯುವ ಬಹುನಿರೀಕ್ಷಿತ ಕರಾವಳಿ ಉತ್ಸವಕ್ಕೆ ನಾಳೆಯಿಂದ ಚಾಲನೆ ದೊರೆಯಲಿದೆ. ಡಿಸೆಂಬರ್ 22 ರಿಂದ 31 ರ ತನಕ ಕರಾವಳಿ ಉತ್ಸವ ನಡೆಯಲಿದೆ. ಡಿಸೆಂಬರ್ 22 ರಂದು ಸಂಜೆ 3.30 ರಿಂದ ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಬೃಹತ್ ‘ ನಡೆಯಲಿದೆ.

ಸಾಂಸ್ಕಂತಿಕ ಮೆರವಣಿಗೆಯ ಉದ್ಘಾಟನೆಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಯು.ಟಿ.ಖಾದರ್ ನರೆವೇರಿಸಲಿದ್ದಾರೆ. ಸಂಜೆ 5.30 ಗಂಟೆಗೆ ಕರಾವಳಿ ಉತ್ಸವ ಮೈದಾನದಲ್ಲಿ ‘ವಸ್ತು ಪ್ರದರ್ಶನವನ್ನು’ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಲಿದ್ದಾರೆ.

ಸಂಜೆ 6 ಗಂಟೆಗೆ ಕರಾವಳಿ ಉತ್ಸವ ಮೈದಾನದಲ್ಲಿ ಕರಾವಳಿ ಉತ್ಸವ ಉದ್ಘಾಟನಾ ಸಮಾರಂಭ ನಡೆಯಲಿದೆ. ಕಾರ್ಯಕ್ರಮವನ್ನು ಬಹುಭಾಷಾ ಖ್ಯಾತ ಚಲನಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಪ್ರಕಾಶ್ ರೈ ಉದ್ಘಾಟಿಸಲಿದ್ದಾರೆ.

( ಕಡತ ಚಿತ್ರ )

ಆಕರ್ಷಕ ಸಾಂಸ್ಕಂತಿಕ ಮೆರವಣಿಗೆ: ಜಿಲ್ಲಾ ಕರಾವಳಿ ಉತ್ಸವದ ಪ್ರಯುಕ್ತ ಇಂದು ಸಂಜೆ ಮಂಗಳೂರು ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಬೃಹತ್ ಸಾಂಸ್ಕೃತಿಕ ಮೆರವಣಿಗೆ ಸಾಗಲಿದೆ.

ಅಪರಾಹ್ನ 3.30ಕ್ಕೆ ಮಂಗಳೂರು ನೆಹರೂ ಮೈದಾನದಿಂದ ಹೊರಡುವ ಮೆರವಣಿಗೆಯು ಎ.ಬಿ ಶೆಟ್ಟಿ ಸರ್ಕಲ್, ಗಡಿಯಾರ ಗೋಪುರ, ಹಂಪನ್‍ಕಟ್ಟೆ ವೃತ್ತ, ಕೆ.ಎಸ್.ರಾವ್ ರಸ್ತೆ , ನವಭಾರತ ಸರ್ಕಲ್, ಪಿ.ವಿ.ಎಸ್. ಜಂಕ್ಷನ್, ಮಹಾತ್ಮಾ ಗಾಂಧಿ ರಸ್ತೆ, ಬಳ್ಳಾಲ್‍ಬಾಗ್, ಲಾಲ್‍ಭಾಗ್, ಕರಾವಳಿ ಉತ್ಸವ ಮೈದಾನದಲ್ಲಿ ಸಂಪನ್ನಗೊಳ್ಳಲಿದೆ.

ವೈವಿಧ್ಯಮಯವಾದ ಸಾಂಸ್ಕೃತಿಕ ತಂಡಗಳಿಂದ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಕಲಾತಂಡಗಳ ಪ್ರದರ್ಶನಗಳು, ನೃತ್ಯಗಳು, ಚೆಂಡೆ, ಡೋಲು ಇತ್ಯಾದಿಗಳನ್ನೊಳಗೊಂಡಿರುತ್ತವೆ. ಸುಮಾರು 80ಕ್ಕೂ ಹೆಚ್ಚು ತಂಡಗಳು ವಿವಿಧ ಜಿಲ್ಲೆಗಳಿಂದ ಪಾಲ್ಗೊಳ್ಳತ್ತಲಿವೆ. ವಿಶೇಷವಾಗಿ ಮಹಿಳಾ ವೀರಗಾಸೆ, ಚಿಕ್ಕ ಮಂಗಳೂರು, ಶಿವಮೊಗ್ಗದ ಡೊಳ್ಳು ಕುಣಿತ, ಸಾಗರದ ಕೋಲಾಟ, ಹಾವೇರಿಯ ಪುರವಂತಿಕೆ, ಧಾರವಾಡದ ಜಗ್ಗಲಿಗೆ ಮೇಳ, ಮಾಗಡಿಯ ಪಟ್ಟದ ಕುಣಿತ, ತುಮಕೂರಿನ ಸೋಮನ ಕುಣಿತ, ರಾಮನಗರದ ಪೂಜಾ ಕುಣಿತ, ಮೈಸೂರಿನ ವೀರ ಭದ್ರ ಕುಣಿತ, ಹಾವೇರಿಯ ಬೇಡರ ಕುಣಿತ, ಕಾರವಾರದ ಸುಗ್ಗಿ ಕುಣಿತ, ಮೈಸೂರಿನ ಕಂಸಾಳೆ, ಬದಿಯಡ್ಕದ ತ್ರಯಂಬಕಂ, ಕಾಸರಗೋಡಿನ ದುಡಿಇನದನ ತಂಡಗಳಲ್ಲದೆ. ಕನ್ನಡ ಭುವನೇಶ್ವರಿಯ ಟ್ಯಾಬ್ಲೊ ಮೊದಲ್ಗೊಂಡು ತುಳುನಾಡಿನ ಜನಪದ ಕುಣಿತ, ಯಕ್ಷಗಾನ ವೇಷಗಳು, ಸೋಣ ಜೋಗಿ ಕುಣಿತ ಹುಲಿವೇಷ, ತಾಲೀಮು, ಶಂಖ ದಾಸರು, ಜಾನಪದ ಗೊಂಬೆ, ಕೊರಗರ ಗಜಮೇಳ ಮರಕಾಲು ಹುಲಿ ವೇಷ, ಇತ್ಯಾದಿ ಅನೇಕಾನೇಕ ತಂಡಗಳು ಭಾಗವಹಿಸಲಿದೆ. ಬೆಡಿ ಗರ್ನಲ್, ಸಹಿತವಾಗಿ ವಿವಿಧ ದೇವಸ್ಥಾನಗಳಿಂದ ಸಾಂಪ್ರದಾಯಿಕ ವಾದನದೊಂದಿಗೆ ತಟ್ಟೀರಾಯ, ಬೇತಾಳ ಮೆರವಣಿಗೆಗೆ ಮೆರುಗು ನೀಡಲಿದೆ. ಅನೇಕ ವಿದ್ಯಾ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು, ಎನ್‍ಸಿಸಿ, ಸ್ಕೌಟ್ಸ್ ಗೈಡ್ಸ್ ಭಾರತ ಸೇವಾದಲ, ಬ್ಯಾಂಕ್, ಅಂಜೆ ಇತ್ಯಾದಿ ಸಂಸ್ಥೆಗಳೂ ಪಾಲ್ಗೊಳ್ಳಲಿವೆ.

ಕಾಲೇಜು ವಿದ್ಯಾರ್ಥಿಗಳನ್ನೊಳಗೊಂಡಂತೆ ಸುಮಾರು ಐದು ಸಾವಿರ ವಿದ್ಯಾರ್ಥಿಗಳು ವಿವಿಧ ಸಾಮಾಜಿಕ ಚಿಂತನೆಗಳ ಅಭಿವ್ಯಕ್ತ ಪ್ರದರ್ಶನದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಶೇಷ ಪ್ರದರ್ಶನ : ಕರಾವಳಿ ಉತ್ಸವ ವಸ್ತು ಪ್ರದರ್ಶನ ಮಂಟಪ ಹೊರ ಆವರಣದ ಮೈದಾನದಲ್ಲಿ 5.30 ರಿಂದ 7 ರವರೆಗೆ ರಾಜ್ಯದಾದ್ಯಂತದಿಂದ ಬಂದ ಕಲಾ ತಂಡಗಳು ವಿಶೇಷ ಪ್ರದರ್ಶನವನ್ನು ನೀಡಲಿದ್ದಾರೆ.

ವಿಶೇಷ ವ್ಯವಸ್ಥೆ : ಮೆರವಣಿಗೆಯಲ್ಲಿ ಭಾಗವಹಿಸಿದ ಎಲ್ಲಾ ಬಂಧುಗಳಿಗೆ ಉಪ್ಪಿಟ್ಟು, ಅವಲಕ್ಕಿ, ಬಾದಾಮಿ ಹಾಲು, ಲಾಡು, ಕಿತ್ತಲೆ, ಕುಡಿಯುವ ನೀರು (ಸಣ್ಣ ಬಾಟಲ್‍ಗಳಲ್ಲಿ), ಮೆರವಣಿಗೆಯ ನಂತರ ಕರಾವಳಿ ಉತ್ಸವ ಮೈದಾನದಲ್ಲಿ ಉಪಹಾರದ ವ್ಯವಸ್ಥೆ ಮಾಡಲಾಗಿದ್ದು ಸಾರ್ವಜನಿಕರು ಅತ್ಯಧಿಕ ಸಂಖ್ಯೆಯಲ್ಲಿ ಈ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಕರಾವಳಿ ಉತ್ಸವ ಮೆರವಣಿಗೆಯ ಸಮಿತಿಯ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ವಿನಂತಿಸಿದ್ದಾರೆ.

 22ರ ಸಾಂಸ್ಕಂತಿಕ ಕಾರ್ಯಕ್ರಮಗಳು:

ಕರಾವಳಿ ಉತ್ಸವ ಪ್ರಯುಕ್ತ ಡಿಸೆಂಬರ್ 22 ರಂದು ಕದ್ರಿ ಉದ್ಯಾನವನದಲ್ಲಿ ನಡೆಯುವ ಕಾರ್ಯಕ್ರಮಗಳು ಇಂತಿವೆ: ಸಂಜೆ 6 ಗಂಟೆಗೆ ಪುತ್ತೂರಿನ ವಿದುಷಿ ಶಂಕರಿ ಮೂರ್ತಿ ಬಾಳಿಲ ಹಾಗೂ ತಂಡದಿಂದ ‘ಕರ್ನಾಟಕೀ ಶಾಸ್ತ್ರೀಯ ಗಾಯನ’, ಸಂಜೆ 7.15 ಗಂಟೆಗೆ ಮಂಗಳೂರಿನ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಮತ್ತು ತಂಡ ದಿಂದ ‘ವಿಸ್ಮಯ ಜಾದೂ’ ಪ್ರದರ್ಶನ ನಡೆಯಲಿದೆ.

Comments are closed.