
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ ಮಾತ್ರಕ್ಕೆ ಅಭ್ಯರ್ಥಿ ಟಿಕೆಟ್ ಫೈನಲ್ ಅಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಗಾಗಿ ಕೆಲ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿರುವುದು ಇದೀಗ ಟಿಕೆಟ್ ಆಕಾಂಕ್ಷಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಎರಡೆರಡು ಬಾರಿ ಸರ್ವೆ ನಡೆಸಿದ ನಂತರ ಚುನಾವಣೆಯಲ್ಲಿ ಗೆಲ್ಲುವಂತಹ ಅಭ್ಯರ್ಥಿಗಳನ್ನು ಘೋಷಿಸಲಿದ್ದಾರೆ. ಕೇವಲ ಬಿಎಸ್‌ವೈ ಘೋಷಿಸಿದ್ದಾರೆ ಎಂದ ಮಾತ್ರಕ್ಕೆ ಟಿಕೆಟ್ ದೊರೆಯಿತು ಎಂದು ಭಾವಿಸಬೇಕಾಗಿಲ್ಲವೆಂದು ಟಾಂಗ್ ನೀಡಿದ್ದಾರೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿನ ಬಿಜೆಪಿ ಅಭ್ಯರ್ಥಿಗಳನ್ನು ಪಕ್ಷದ ಹೈಕಮಾಂಡ್ ಆಯ್ಕೆ ಮಾಡಲಿದೆ. ಇದರಲ್ಲಿ ಯಡಿಯೂರಪ್ಪರಾಗಲಿ ಅಥವಾ ರಾಜ್ಯಘಟಕಕ್ಕೆ ಅಧಿಕಾರವಿಲ್ಲ ಎಂದು ಹಿರಿಯ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
Comments are closed.