
ಮಂಗಳೂರು,ಜನವರಿ,01: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‍ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ಆಶ್ರಯದಲ್ಲಿ ಪತ್ರಕರ್ತರ ಕ್ರೀಡಾಕೂಟ ರವಿವಾಅರ ನಗರದ ನೆಹರು ಮೈದಾನ ಬಳಿಯ ಫುಟ್ಬಲ್ ಮೈದಾನದಲ್ಲಿ ನಡೆಯಿತು.


ಪತ್ರಕರ್ತರ ಕ್ರೀಡಾಕೂಟವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್. ಎನ್. ರಾಜೇಂದ್ರ ಕುಮಾರ್ ಅವರು ಬೆಲೂನ್ ಹಾರಿಸುವ ಮೂಲಕ ಉದ್ಗಾಟಿಸಿದರು. ಬಳಿಕ ನಡೆದ ವಿವಿಧ ಸ್ಪರ್ಧೆಗಳಿಗೆ ಮಂಗಳೂರು ಪೊಲೀಸ್ ಕಮೀಶನರ್ ಟಿ.ಆರ್. ಸುರೇಶ್ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮನಪಾ ಆಯುಕ್ತ ಮುಹಮ್ಮದ್ ನಝೀರ್ ಭಾಗವಹಿಸಿದ್ದರು. ದ.ಜ.ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕೆ. ಆನಂದ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಾಯಕ್, ಮಂಗಳೂರು ಪ್ರೆಸ್‍ಕ್ಲಬ್ ಅಧ್ಯಕ್ಷ ಡಾ. ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ಪತ್ರಿಕಾಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುಪ್ಪರಾಜ್ ಶೆಟ್ಟಿ, ಮಂಗಳೂರು ಪ್ರೆಸ್‍ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಮಾಜಿ ಅಧ್ಯಕ್ಷರಾದ ಪಿ. ಬಿ. ಹರೀಶ್ ರೈ, ರವೀಂದ್ರ ಶೆಟ್ಟಿ, ಹಿರಿಯ ಪತ್ರಕರ್ತ ಯು.ಪಿ. ಶಿವಾನಂದ ಮೊದಲಾದವರು ಉಪಸ್ಥಿತರಿದ್ದರು.
Comments are closed.