
ಹೊಸದಿಲ್ಲಿ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಸತತ ಮೂರನೇ ದಿನವೂ ಶಿಕ್ಷೆ ಪ್ರಮಾಣ ಪ್ರಕಟಿಸುವುದನ್ನು ಮುಂದೂಡಲಾಗಿದೆ.
ಶನಿವಾರ ಮಧ್ಯಾಹ್ನ 2 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷೆ ಪ್ರಮಾಣ ಪ್ರಕಟಿಸಲಾಗುವುದು ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಧೀಶ ಶಿವಪಾಲ್ ಸಿಂಗ್, ಡಿಸೆಂಬರ್ 23ರಂದು ಲಾಲು ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು, ಜನವರಿ 3ರಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದ್ದರು.
ಆದರೆ ಜನವರಿ 3 ಮತ್ತು 4ರಂದು ಸಹ ನ್ಯಾಯಾಧೀಶರು ಶಿಕ್ಷೆ ಪ್ರಮಾಣ ಪ್ರಕಟಿಸುವುದನ್ನು ನ್ಯಾಯಾಧೀಶರು ಮುಂದೂಡಿದ್ದಾರೆ.
Comments are closed.