ಕರ್ನಾಟಕ

ಸೇವೆಯ ಉದ್ದೇಶದಿಂದ ಕರ್ನಾಟಕಕ್ಕೆ ಬಂದಿದ್ದೇವೆ: ಯೋಗಿ ಆದಿತ್ಯನಾಥ್

Pinterest LinkedIn Tumblr

ಬೆಂಗಳೂರು: ಸೇವಾ ಉದ್ದೇಶದಿಂದ ನಾವು ಕರ್ನಾಟಕ ರಾಜ್ಯಕ್ಕೆ ಬಂದಿದ್ದೇವೆಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಹೇಳಿದ್ದಾರೆ.

ಗೋವಿಂದರಾಜ ನಗರದಲ್ಲಿ ನಡೆಯುವ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಭಾಗಿಯಾಗುವ ಸಲುವಾಗಿ ಇಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಗರಕ್ಕೆ ಆಗಮಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕರ್ನಾಟಕ ರಾಜ್ಯಕ್ಕೆ ಬಂದಾಗಲೆಲ್ಲಾ ನಾನು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡುತ್ತೇನೆ. ಈ ಬಾರಿ ಕೂಡ ಮಠಕ್ಕೆ ಭೇಟಿ ನೀಡಲಾಗುತ್ತಿದ್ದು, ಬಳಿಕ ಪರಿವರ್ತವಾ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತೇನೆಂದು ಹೇಳಿದ್ದಾರೆ. ಅಲ್ಲದೆ, ಸೇವೆಯ ಉದ್ದೇಶದಿಂದ ನಾನು ಕರ್ನಾಟಕ ರಾಜ್ಯಕ್ಕೆ ಆಗಮಿಸಿದ್ದೇವೆಂದು ಇದೇ ವೇಳೆ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

Comments are closed.