
ಮಂಗಳೂರು, ಜನವರಿ.8: ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ದೀಪಕ್ ರಾವ್ ಹತ್ಯೆ ನಡೆದ ಬಳಿಕ ಇದಕ್ಕೆ ಪ್ರತಿಕಾರವಾಗಿ ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ಮಾರಾಂಣಾತಿಕವಾಗಿ ಗಾಯಗೊಂಡು ನಾಲ್ಕು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಬಾನುವಾರ ಮೃತಪಟ್ಟ ಅಬ್ದುಲ್ ಬಶೀರ್ ಅವರ ಮನೆಗೆ ನಿನ್ನೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು.
ಬಶೀರ್ ಅವರ ಮಂಗಳೂರಿನ ಆಕಾಶಭವನದಲ್ಲಿರುವ ಮನೆಗೆ ತಮ್ಮ ಬೆಂಬಲಿಗರೊಂದಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿಗಳು ಪ್ರಕರಣವನ್ನು ಗಂಭೀರವಾಗಿ ತನಿಖೆಗೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದರು.

ಅಬ್ದುಲ್ ಬಶೀರ್
ಬಷೀರ್ ಹತ್ಯೆ ಹಿನ್ನಲೆಯಲ್ಲಿ ಶಾಂತಿ ಕಾಪಾಡಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ದೀಪಕ್ ಕುಟುಂಬಕ್ಕೆ ಹತ್ತು ಲಕ್ಷ ಪರಿಹಾರ ನೀಡಿದಂತೆ ಬಶೀರ್ ಕುಟುಂಬಕ್ಕೂ ನೀಡಲಾಗುತ್ತದೆ. ದೀಪಕ್ ರಾವ್ ಹಾಗೂ ಬಶೀರ್ ಅವರನ್ನು ಅಮಾನವೀಯವಾಗಿ ಹತ್ಯೆ ಮಾಡಲಾಗಿದೆ, ಮುಖ್ಯಮಂತ್ರಿಗಳು ಎಂದು ಬೇಸರ ವ್ಯಕ್ತಪಡಿಸಿದರು.”ಈ ಪ್ರಕರಣಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾವ ಸಂಘಟನೆ ಇದರಲ್ಲಿ ಭಾಗಿಯಾಗಿದೆ ಎಂಬ ಬಗ್ಗೆ ತನಿಖೆ ನಡೆಯಲಿದೆ ಎಂಬುದಾಗಿ ಸಿದ್ದರಾಮಯ್ಯ ತಿಳಿಸಿದರು.
ಈ ಸಂದರ್ಭ ಸಚಿವರಾದ ರಮನಾಥ್ ರೈ, ಯು.ಟಿ. ಖಾದರ್, ಶಾಸಕ ಮೊಯ್ದಿನ್ ಬಾವ, ಮೇಯರ್ ಕವಿತಾ ಸನಿಲ್ ಹಾಗು ಇತರ ಮುಖಂಡರು ಮುಖ್ಯಮಂತ್ರಿಗಳ ಜೊತೆಗಿದ್ದರು.
ಜನವರಿ 3 ರಂದು ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ದೀಪಕ್ ರಾವ್ ಹತ್ಯೆಗೀಡಾಗಿದ್ದರು. ಅದೇ ದಿನ ರಾತ್ರಿ ಕೊಟ್ಟಾರದ ಸಮೀಪ ದುಷ್ಕರ್ಮಿಗಳು ಬಶೀರ್ ಅವರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದರು. ಆದರೆ ತಕ್ಷಣ ನಗರದ ಆಸ್ಪತ್ರೆಗೆ ಬಶೀರ್ ಅವರನ್ನು ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿತ್ತು. ಆಸ್ಪತ್ರೆಯಲ್ಲಿ ನಾಲ್ಕು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಬಶೀರ್ ಅವರು ಬಾನುವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದರು.
Comments are closed.