
ರತ್ನಪುರಿ(ಮಧ್ಯಪ್ರದೇಶ): ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವೈಫಲ್ಯ ಅನುಭವಿಸಿದ್ದಕ್ಕೆ ಆಘಾತಗೊಂಡ ಅವರ ಕಟ್ಟಾಭಿಮಾನಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ರತ್ನಪುರಿಯಲ್ಲಿ 63 ವರ್ಷದ ಬಾಬುಲಾಲ್ ಬೈರ್ವ ಎಂಬುವರು ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಇದನ್ನು ಗಮನಿಸಿದ ಆತನ ಪತ್ನಿ ಕಿರುಚಿಕೊಂಡಾಗ ಆಸುಪಾಸಿನವರು ಬಂದು ಬೆಂಕಿ ಹಾರಿಸಿ ಕೂಡಲೇ ಬಾಬುಲಾಲ್ ರನ್ನು ಆಸ್ಪತ್ರೆಗೆ ದಾಖಲಿಸಿದರು.
ಸದ್ಯ ಬಾಬುಲಾಲ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಮುಖ ಮತ್ತು ತಲೆಗೆ ಸುಟ್ಟ ಗಾಯಗಳಿಂದ ತೀವ್ರ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಕೇವಲ 5 ರನ್ ಪೇರಿಸಿ ಔಟಾಗಿದ್ದರು. ಇದರಿಂದಾಗಿ ಬಾಬುಲಾಲ್ ಈ ಕೃತ್ಯವೆಸಗಿದ್ದಾರೆ ಎಂದು ಅಮರ್ ಉಜಾಲಾ ಪತ್ರಿಕೆಯೊಂದು ವರದಿ ಮಾಡಿದೆ.
Comments are closed.