
ಜಮ್ಮು-ಕಾಶ್ಮೀರ: ಗಡಿ ನುಸುಳಿ ಆತ್ಮಾಹುತಿ ದಾಳಿಗೆ ಯತ್ನಿಸಿದ್ದ ನಾಲ್ವರು ಉಗ್ರರನ್ನು ಭದ್ರತಾ ಪಡೆ ಸೋಮವಾರ ಬೆಳಗ್ಗೆ ಹೊಡೆದುರುಳಿಸಿರುವ ಘಟನೆ ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನ ದೌಲಾಂಜಾ ಪ್ರದೇಶದ ಗಡಿ ಭಾಗದಲ್ಲಿ ನಡೆದಿದೆ.
ಭಾರತೀಯ ಯೋಧರು ಪಾಕಿಸ್ತಾನ ಮೂಲದ ಜೈಷ್ ಇ ಮುಹಮ್ಮದ್ ಉಗ್ರಗಾಮಿ ಸಂಘಟನೆಯ ನಾಲ್ವರು ಉಗ್ರರ ಆತ್ಮಾಹುತಿ ದಾಳಿಯನ್ನು ವಿಫಲಗೊಳಿಸಿರುವುದಾಗಿ ಜಮ್ಮು ಕಾಶ್ಮೀರದ ಡಿಜಿಪಿ ಪೌಲ್ ವಾಯ್ಡ್ ತಿಳಿಸಿದ್ದಾರೆ.
ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್ ಪಡೆ(ಸಿಎಪಿಎಫ್), ಸೇನೆ ಹಾಗೂ ರಾಜ್ಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಹೇಳಿದರು.
-ಉದಯವಾಣಿ
Comments are closed.