ಕರ್ನಾಟಕ

ವಿದೇಶಿ ಯುವತಿಯಿಂದ ಪೇದೆಗೆ ಕಪಾಳಮೋಕ್ಷ

Pinterest LinkedIn Tumblr


ಬೆಂಗಳೂರು: ನೈಜೀರಿಯಾ ಮೂಲದ ವಿದ್ಯಾರ್ಥಿನಿಯೊಬ್ಬಳು ಪೇದೆಗೆ ಕಪಾಳ ಮೋಕ್ಷ ಮಾಡಿರುವ ಘಟನೆ ಗುರುವಾರ ನಡೆದಿದೆ.

ಸಂಚಾರ ನಿಯಮ ಉಲ್ಲಂಘಿಸಿ ಕಾರು ಚಾಲನೆ ಮಾಡುತ್ತಿದ್ದ ಯುವತಿಯ ಕಾರನ್ನು ತಡೆದು ಪ್ರಶ್ನಿಸಿದ್ದಕ್ಕೆ ಸಂಚಾರಿ ಪೊಲೀಸ್ ಪೇದೆ ಆನಂದ್ ಕಪಾಳಕ್ಕೆ ವಿದ್ಯಾರ್ಥಿನಿ ಬಾರಿಸಿದ್ದಾಳೆ.

ಯುವತಿಯು ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದು, ಸ್ಥಳೀಯರ ಸಹಾಯದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.