
ಹಾಸನ: ರಸ್ತೆ ಕಾಂಕ್ರಿಟೀಕರಣ ಕಾರ್ಯ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶನಿವಾರದಿಂದ ಮೂರು ತಿಂಗಳವರೆಗೆ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ -75 ಬಂದ್ ಮಾಡಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ಏಪ್ರಿಲ್ 13, 2018ರ ವರೆಗೆ ಹೆದ್ದಾರಿ ಬಂದ್ ಆಗಲಿದ್ದು, ಬದಲಿ ಮಾರ್ಗದಲ್ಲಿ ಸಂಚಾರ ಮಾಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರು ಮತ್ತು ಮಂಗಳೂರು ನಡುವಿನ ಮುಖ್ಯ ಸಂಪರ್ಕ ರಸ್ತೆ ಇದಾಗಿದ್ದು, ಹಾಸನ, ಸಕಲೇಶಪುರ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಾಗಿದೆ.
Comments are closed.