ಕರ್ನಾಟಕ

ರೆಡ್ಡಿ ರಾಜಕೀಯಕ್ಕೆ ಭಾರೀ ಹಿನ್ನಡೆ; ಸುಪ್ರೀಂಕೋರ್ಟ್ ಹೇಳಿದ್ದೇನು?

Pinterest LinkedIn Tumblr


ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ಮುಖಂಡ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ನಲ್ಲಿ ಭಾರೀ ಹಿನ್ನಡೆ ಆಗಿದೆ. ಬಳ್ಳಾರಿ ಜಿಲ್ಲೆಗೆ ತೆರಳದಂತೆ ಹೇರಿದ್ದ ಷರತ್ತು ಸಡಿಲಿಸಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಬಳ್ಳಾರಿ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು ವಿಧಿಸಿ ಜಾಮೀನು ನೀಡಿತ್ತು. ಇದೀಗ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ರೆಡ್ಡಿ ಮತ್ತೆ ಸುಪ್ರೀಂ ಮೊರೆ ಹೋಗಿರುವುದಾಗಿ ವರದಿ ತಿಳಿಸಿದೆ.

ಆದರೆ ಬಳ್ಳಾರಿ ಜಿಲ್ಲೆಗೆ ಪ್ರವೇಶಿಸಬಾರದೆಂದು ವಿಧಿಸಿದ್ದ ಷರತ್ತು ಸಡಿಲಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಮೊದಲು ಜನಾರ್ದನ ರೆಡ್ಡಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಲಿ ನಂತರ ಷರತ್ತು ಸಡಿಲಿಕೆ ಕುರಿತು ವಿಚಾರಣೆ ನಡೆಸುವ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ರಾಜಕೀಯವಾಗಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ರೆಡ್ಡಿ ಸಿದ್ಧತೆಗೆ ಭಾರೀ ಹಿನ್ನಡೆಯಾದಂತಾಗಿದೆ.

-ಉದಯವಾಣಿ

Comments are closed.