ಕರಾವಳಿ

ಮೂಡಬಿದ್ರೆಯಲ್ಲಿ ಹಾಸ್ಟೇಲ್ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

Pinterest LinkedIn Tumblr

( ಸಾಂದರ್ಭಿಕ ಚಿತ್ರ )

ಮಂಗಳೂರು: ಮೂಡಬಿದ್ರೆಯಲ್ಲಿ ಹಾಸ್ಟೇಲ್ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಕೊಂಡಿರುವ ಘಟನೆ ಗುರುವಾರ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಬರೆದಿಟ್ಟಿದ್ದಾಳೆ ಎನ್ನಲಾದ ಡೆತ್‌ನೋಟ್‌‌ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದ ರಚನಾ ಎಂ. ಎಂದು ಗುರುತಿಸಲಾಗಿದೆ.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ರಚನಾ, ಗುರುವಾರ ಕಾಲೇಜಿಗೆ ಸ್ಟಡಿ ಹಾಲಿಡೇಸ್ ಇರುವುದರಿಂದ ಲೈಬ್ರರಿಗೆ ಬಂದಿದ್ದಳು. ಬಳಿಕ ಕಾಲೇಜಿನ 5 ನೇ ಮಹಡಿಗೆ ತೆರಳಿದ ರಚನಾ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

ಈ ಹಿಂದೆ‌ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ರಚನಾ ಕೌನ್ಸಿಲಿಂಗ್ ಪಡೆದಿದ್ದಳು ಎನ್ನಲಾಗಿದೆ. ಪ್ರಥಮ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದಿದ್ದ ರಚನಾ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕಾಗಿ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಲಾಗಿದೆ.

ರಚನಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್‌ನೋಟ್‌ನಲ್ಲಿ ಅನಾರೋಗ್ಯದ ಬಗ್ಗೆ ಉಲ್ಲೇಖಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Comments are closed.