
ಮಂಗಳೂರು, ಜನವರಿ.26: ದ.ಕ. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಸಂಭ್ರಮಾಚರಣೆ ಸಮಾರಂಭ ನಗರದ ಕೇಂದ್ರ ಮೈದಾನದಲ್ಲಿ ಶುಕ್ರವಾರ ಬೆಳಗ್ಗೆ ನಡೆಯಿತು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವ ಸಂದೇಶ ನೀಡಿದರು.

ಸಮಾರಂಭದಲ್ಲಿ ಆರು ಮಂದಿ ಸಾಧಕರಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಬ್ದುಲ್ ಹಮೀದ್, ಪ್ರಕಾಶ್ ಮರಾಠೆ ಅವರಿಗೆ ಜೀವರಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೋ, ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕಬಿ.ಎ.ಮೊಯ್ದಿನ್ ಬಾವ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಂಗಳೂರು ಮೇಯರ್ ಕವಿತಾ ಸನಿಲ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮೂಡಾ ಅಧ್ಯಕ್ಷ ಸುರೇಶ್ ಬಳ್ಳಾಲ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಅಪರ ಜಿಲ್ಲಾಧಿಕಾರಿ ಕುಮಾರ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Comments are closed.