ಕರ್ನಾಟಕ

ಬಿಜೆಪಿ ಮಾಜಿ ಸಚಿವ ಆನಂದ್ ಸಿಂಗ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

Pinterest LinkedIn Tumblr

ಬೆಂಗಳೂರು: ಬಿಜೆಪಿ ಪಕ್ಷದಲ್ಲಿದ್ದ ಮಾಜಿ ಸಚಿವ ಆನಂದ್ ಸಿಂಗ್ ಅವರು ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಹಿಂದೆಯೇ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷ ತೊರೆದಿದ್ದ ಆನಂದ್ ಸಿಂಗ್ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಗೆ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ್ದ ಆನಂದ್ ಸಿಂಗ್ ಅವರು, ಕೆಪಿಸಿಸಿ ಅಧ್ಯಕ್ಷರಾದ ಜಿ. ಪರಮೇಶ್ವರ ಅವರ ಸಮ್ಮುಖದಲ್ಲಿ ಆನಂದ್‌ ಸಿಂಗ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಎಸ್. ಆರ್. ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಇದ್ದರು.

ಕಳೆದ ಭಾನುವಾರ ತಮ್ಮ ವಿಜಯನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಶಾಸಕ ಆನಂದ್ ಸಿಂಗ್, ಕಾಂಗ್ರೆಸ್ ಸೇರ್ಪಡೆ ಕುರಿತು ಒಲವು ವ್ಯಕ್ತಪಡಿಸಿದ್ದರು. ಆನಂದ್ ಸಿಂಗ್ ಅವರ ರಾಜಿನಾಮೆ ಕುರಿತು ಪ್ರತಿಕ್ರಿಯಿಸಿದ್ದ ಬಿಜೆಪಿ ನಾಯಕರು, ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅವರಿಗೆ ಒತ್ತಡ ಹೇರಲಾಗಿತ್ತು. ಬೆದರಿಕೆಯೊಡ್ಡಿ ಅವರಿಂದ ರಾಜೀನಾಮೆ ಪಡೆಯಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಸಂಸದ ಪ್ರಹ್ಲಾದ ಜೋಶಿ ದೂರಿದ್ದಾರು. ಆನಂದ್ ಸಿಂಗ್ ವಿರುದ್ಧ ಹಲವು ಪ್ರಕರಣಗಳಿರುವ ಕಾರಣ ಅವರಿಗೆ ರಾಜೀನಾಮೆ ಸಲ್ಲಿಸುವಂತೆ ಒತ್ತಡ ಹೇರಲಾಗಿತ್ತು ಎಂದ ಜೋಷಿ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದಾಗ ಇದೇ ಆನಂದ್ ಸಿಂಗ್ ವಿರುದ್ಧ ಸಮರ ಸಾರಿದ್ದರು. ಆದರೆ ಇಂದು ಅವರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿರುವುದೇಕೆ ಎಂದು ಪ್ರಶ್ನಿಸಿದ್ದರು.

Comments are closed.