
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಸರ್ಕಾರ ರಚನೆ ಮಾಡುವ ಪಣ ತೊಟ್ಟಿರುವ ಜ್ಯಾತ್ಯಾತೀತ ಜನತಾದಳ ಪಕ್ಷ ಬಹುಜನ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮುನ್ಸೂಚನೆ ನೀಡಿದೆ.
ಮೂಲಗಳ ಪ್ರಕಾರ ಬಿಎಸ್ಪಿ ಮತ್ತು ಜೆಡಿಎಸ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದು, ಚುನವಣೆಯಲ್ಲಿ ಉಭಯ ಪಕ್ಷಗಳ ಮೈತ್ರಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಿಎಸ್ ಪಿ ಮುಖಂಡ ಎಸ್ ಸಿ ಮಿಶ್ರಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಒಟ್ಟು 224 ಕ್ಷೇತ್ರಗಳಲ್ಲಿ ಬಿಎಸ್ ಪಿ ಪಕ್ಷ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಹೇಳಲಾಗಿದೆ. ಅಂತೆಯೇ 30 ಜಿಲ್ಲೆಗಳ 14 ಕ್ಷೇತ್ರಗಳಲ್ಲಿ ಜೆಡಿಎಸ್-ಬಿಎಸ್ಪಿ ಮೈತ್ರಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
ಇನ್ನು ಇದೇ ಫೆಬ್ರವರಿ 17ರಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಅಂದೇ ದೇವೇಗೌಡ ಅವರೊಂದಿಗೆ ಸೇರಿ ಬೃಹತ್ ಸಮಾವೇಶ ನಡೆಸುವ ಮೂಲಕ ಚುನಾವಣೆಯಲ್ಲಿ ಬಿಎಸ್ಪಿ-ಜೆಡಿಎಸ್ ಮೈತ್ರಿಯನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ಇನ್ನು ಈ ಮೈತ್ರಿ ಬಗ್ಗೆ ಜೆಡಿಎಸ್ ಮುಖಂಡರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
#Karnataka: JDS & BSP enter into an alliance for upcoming Karnataka assembly elections. Out of 224 seats, BSP to contest on 20.
— ANI (@ANI) February 8, 2018
Comments are closed.