
ಬೆಂಗಳೂರು: ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಉತ್ತಮ ಆರೋಗ್ಯ ಒದಗಿಸುವ ಹಿತದೃಷ್ಟಿಯಿಂದ ರಾಜ್ಯ ಸರಕಾರ ಆರೋಗ್ಯ ಕರ್ನಾಟಕ ಯೋಜನೆ ಎಂಬ ಯೋಜನೆಯನ್ನು ಪ್ರಕಟಿಸಿದೆ. ಯೋಜನೆ ಫೆಬ್ರವರಿಯಲ್ಲಿ ಪ್ರಾರಂಭವಾಗ ಲಿದ್ದು, ವರ್ಷದ ಅಂತ್ಯ ದೊಳಗೆ ರಾಜ್ಯಾದ್ಯಂತ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಂದಿನ ಏಳು ವರ್ಷಗಳಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳ ಸೌಲಭ್ಯ ಒದಗಿಸಲು ಪ್ರತಿ ಐದು ಸಾವಿರ ಜನಸಂಖ್ಯೆಗೆ ಇರುವ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, 9 ಸಾವಿರ ಆರೋಗ್ಯ ಮತ್ತು ಸೌಖ್ಯ ಕೇಂದ್ರ ಗಳನ್ನು ಸ್ಥಾಪಿಸಲಾಗುವುದು.
ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಸೇವೆ ಬಲಪಡಿಸಲು ಶಿಶು ಹಾಗೂ ತಾಯಿ ಮರಣ ಪ್ರಮಾಣ ಕಡಿತಗೊಳಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಕಾರದೊಂದಿಗೆ ಉತ್ತಮ ತಾಂತ್ರಿಕ ಸೇವೆಗಳನ್ನು ಬಳಸುವುದಾಗಿ ತಿಳಿಸಿದ್ದಾರೆ.
ಕ್ರಾಮಿಕ ಕಾಯಿಲೆಗಳನ್ನು ಶೀಘ್ರ ಪತ್ತೆಹಚ್ಚಿ ನಿರ್ಮೂಲನೆ ಮಾಡಲು ತುರ್ತು ಕ್ರಮ, ಕಡಿಮೆ ಬೆಲೆಯಲ್ಲಿ ಉತ್ತಮ ಚಿಕಿತ್ಸೆ, ಕರ್ನಾಟಕ ಖಾಸಗಿ ವೈದ್ಯಕೀಯ ಕಾಯ್ದೆಯ ಅನುಷ್ಠಾನದ ಮೇಲ್ವಿಚಾರಣೆ ಮಾಡಲು ರಾಜ್ಯ ಆರೋಗ್ಯ ಪರಿಷತ್ ಸೇರಿದಂತೆ ಹಲವು ಹೊಸ ಕಾರ್ಯಕ್ರಮಗಳನ್ನು ಪ್ರಕಟಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 6645 ಕೋಟಿ ಅನುದಾನ ಒದಗಿಸಲಾಗಿದೆ.
Comments are closed.